ETV Bharat / state

ಅಸಂಘಟಿತ ಕಾರ್ಮಿಕರ ಭದ್ರತೆಗೆ ಪ್ರತ್ಯೇಕ ಕಾನೂನು: ಶಿವರಾಮ ಹೆಬ್ಬಾರ್

ರಾಜ್ಯದ ಎಲ್ಲಾ ಅಸಂಘಟಿತ ಕಾರ್ಮಿಕರ ಭದ್ರತೆಗೆ ಪ್ರತ್ಯೇಕವಾದ ಕಾನೂನನ್ನು ರಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಸಕ್ಕರೆ ಸಚಿವ ಅರೆಬೈಲ ಶಿವರಾಮ ಹೆಬ್ಬಾರ್ ಹೇಳಿದರು.

Meeting
Meeting
author img

By

Published : Aug 28, 2020, 10:08 PM IST

ಧಾರವಾಡ: ರಾಜ್ಯದಲ್ಲಿ ಸಂಘಟಿತ ಹಾಗೂ ವಲಸೆ ಕಾರ್ಮಿಕರ ಸಂಖ್ಯೆಗನುಗುಣವಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕ್ಷೌರಿಕ, ಮಡಿವಾಳ, ಟೈಲರ್ ವೃತ್ತಿ ಮಾಡುವ ಅಸಂಘಟಿತ ಕಾರ್ಮಿಕರ ಸಮೀಕ್ಷೆ ಮಾಡಿ ದತ್ತಾಂಶ ಸಂಗ್ರಹಿಸಲು ಕಾರ್ಮಿಕ ಇಲಾಖೆ ನಿರ್ಧರಿಸಿದ್ದು, ಬರುವ ಅಧಿವೇಶನದಲ್ಲಿ ರಾಜ್ಯದ ಎಲ್ಲಾ ಅಸಂಘಟಿತ ಕಾರ್ಮಿಕರ ಭದ್ರತೆಗೆ ಪ್ರತ್ಯೇಕವಾದ ಕಾನೂನನ್ನು ರಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಹಾಗೂ ಸಕ್ಕರೆ ಸಚಿವ ಅರೆಬೈಲ ಶಿವರಾಮ ಹೆಬ್ಬಾರ್ ಹೇಳಿದರು.

ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಇಲಾಖೆ ಫಲಾನುಭವಿಗಳಿಗೆ ಪರಿಹಾರ ಚೆಕ್‍ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಮಿಕ ಇಲಾಖೆಯು ಕಾರ್ಮಿಕರು ಮತ್ತು ಮಾಲೀಕರ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದೆ. ಕಾರ್ಮಿಕ ವರ್ಗದ ಶ್ರಮದಿಂದಾಗಿ ದೇಶದ ಅಭಿವೃದ್ಧಿಗೆ ವೇಗ ಸಿಕ್ಕಿದೆ. ಕಾರ್ಮಿಕರ ಹಿತ ರಕ್ಷಣೆಗಾಗಿ ವಿವಿಧ ಕಾನೂನುಗಳು ಅಸ್ತಿತ್ವದಲ್ಲಿದ್ದರೂ ಸಹ ಉದ್ಯೋಗ ಕಡಿತ ಹಾಗೂ ಉತ್ಪಾದನೆಗಳ ಸ್ಥಗಿತದ ಹಿನ್ನೆಲೆಯಲ್ಲಿ ಇಲಾಖೆಯು ಮಾನವೀಯತೆ ನಿಟ್ಟಿನಲ್ಲಿ ಸಮನ್ವಯತೆಯಿಂದ ಕೆಲಸ ಮಾಡುತ್ತಿದೆ. ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಹೊಸ ಕೈಗಾರಿಕಾ ನೀತಿಯು ಕಾರ್ಮಿಕ ವರ್ಗಕ್ಕೆ ಪೂರಕವಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರವು ರಾಜ್ಯದಲ್ಲಿ ಕಾರ್ಮಿಕ ಸ್ನೇಹಿ ವಾತಾವರಣಕ್ಕೆ ಹೆಚ್ಚು ಒತ್ತು ಕೊಟ್ಟು ಕಾರ್ಯ ಮಾಡುತ್ತಿದೆ. ಮುಂಬರುವ ದಿನಗಳಲ್ಲಿ ಕಾರ್ಮಿಕರ ಮಕ್ಕಳಿಗೆ ಆಯಾ ಕೈಗಾರಿಕಾ ಪ್ರದೇಶಗಳಲ್ಲಿ ವಸತಿಯುತ ಶಾಲೆಗಳನ್ನು ಆರಂಭಿಸಲು ಇಲಾಖೆ ಚಿಂತನೆ ಮಾಡುತ್ತಿದೆ. ತಮಿಳುನಾಡು, ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಗೆ ಅಲ್ಲಿನ ಕಾರ್ಮಿಕ ಇಲಾಖೆಗಳು ಹಮ್ಮಿಕೊಂಡಿರುವ ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳು, ವಿವಿಧ ಕಲ್ಯಾಣ ಮಂಡಳಿಗಳು ನಿರ್ವಹಿಸುತ್ತಿರುವ ಕಾರ್ಯ ಹಾಗೂ ಯೋಜನೆಗಳ ಕುರಿತು ಅಧ್ಯಯನ ಮಾಡಲು ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳ ತಂಡವನ್ನು ಅಧ್ಯಯನಕ್ಕೆ ನೇಮಿಸಲಾಗಿದೆ. ಅವರು ನೀಡುವ ವರದಿ ಆಧಾರದ ಮೇಲೆ ಇತರೆ ರಾಜ್ಯಗಳ ಕಾರ್ಮಿಕ ಕಲ್ಯಾಣ ಮಾದರಿ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಕರ್ತವ್ಯ ನಿರ್ವಹಿಸುವಾಗ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ಮಾಡಬೇಕು. ಮಾಸ್ಕ್, ಸ್ಯಾನಿಟೈಸರ್ ನಿರಂತರವಾಗಿ ಬಳಸಬೇಕು. ರಾಜ್ಯ ಸರ್ಕಾರ ಲಾಕ್‍ಡೌನ್ ಸಂದರ್ಭ ಸೇರಿದಂತೆ ವಿವಿಧ ಕಾಲಾವಧಿಯಲ್ಲಿ ಸಂಘಟಿತ, ಅಸಂಘಟಿತ ಮತ್ತು ವಲಸೆ ಕಾರ್ಮಿಕರಿಗೆ ಊಟ, ತಾತ್ಕಾಲಿಕ ವಸತಿ, ಆಹಾರ ಕಿಟ್ ಮತ್ತು ಪರಿಹಾರ ಧನ ನೀಡಿ ಧೈರ್ಯ ತುಂಬಿದೆ. ಕೊರೊನಾದಂತಹ ಕಷ್ಟ ಕಾಲವನ್ನು ಕಾರ್ಮಿಕರು ಸೇರಿದಂತೆ ಎಲ್ಲರೂ ಸಮರ್ಥವಾಗಿ ಎದುರಿಸಬೇಕು. ಕಾರ್ಮಿಕರು ಭರವಸೆ ಕಳೆದುಕೊಳ್ಳದೇ ಬದುಕು ಕಟ್ಟಿಕೊಳ್ಳಬೇಕು. ಬರುವ ಸೆಪ್ಟೆಂಬರ್ 1 ರಿಂದ ಪೂರ್ವ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳನ್ನು ಹೊರತುಪಡಿಸಿ ಎಲ್ಲಾ ರೀತಿಯ ಕೈಗಾರಿಕೆ ಹಾಗೂ ಇತರ ಚಟುವಟಿಕೆಗಳನ್ನು ಆರಂಭಿಸಲು ಸರ್ಕಾರ ಅನುಮತಿ ನೀಡಲಿದೆ. ತುರ್ತಾಗಿ ರಾಷ್ಟ್ರದಲ್ಲಿ ಆರ್ಥಿಕ ಚಟುವಟಿಕೆಗಳ ಪುನರಾರಂಭ ಮಾಡುವ ಅಗತ್ಯವಿದೆ ಎಂದು ಹೇಳಿದರು.

ಸಭೆಯ ನಂತರ ಕಾರ್ಮಿಕ ಇಲಾಖೆಯ ಮದುವೆಯ ಧನ ಸಹಾಯ, ಶೈಕ್ಷಣಿಕ ಧನ ಸಹಾಯ, ಅಂತ್ಯ ಸಂಸ್ಕಾರ ಧನಸಹಾಯ, ವಾಣಿಜ್ಯ ವಾಹನ ಚಾಲಕರ ಅಪಘಾತ ಪರಿಹಾರವಾಗಿ ನೀಡುವ ಧನಸಹಾಯದ ಚೆಕ್‍ಗಳನ್ನು ವಿವಿಧ ಕಾರ್ಮಿಕ ಫಲಾನುಭವಿಗಳಿಗೆ ವಿತರಿಸಿದರು. ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ಹಮಾಲರು, ಅಕ್ಕಸಾಲಿಗರು, ಮಡಿವಾಳರು, ಮನೆಗೆಲಸದವರು, ಟೈಲರ್, ಕ್ಷೌರಿಕ, ಚಿಂದಿ ಆಯುವ ವೃತ್ತಿಯ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿದರು.

ಸಭೆಯ ಪೂರ್ವದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಅವರು ರಾಯಾಪುರದ ಎಎಚ್‍ಪಿ ಗಾರ್ಮೆಂಟ್ಸ್, ಬೇಲೂರು ಕೈಗಾರಿಕಾ ಪ್ರದೇಶದ ಟಾಟಾ ಮಾರ್ಕೋಪೋಲೋ, ಟಾಟಾ ಹಿಟಾಚಿ ಕೈಗಾರಿಕೆಗಳಿಗೆ ಭೇಟಿ ನೀಡಿ ಕಾರ್ಮಿಕರೊಂದಿಗೆ ಹಾಗೂ ಆಡಳಿತ ವರ್ಗದೊಂದಿಗೆ ಉದ್ಯೋಗದ ಸ್ಥಿತಿಗತಿ ಕುರಿತು ಚರ್ಚಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.