ಹುಬ್ಬಳ್ಳಿ: ಅವಳಿನಗರದಲ್ಲಿ ಮನೆ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಆತನಿಂದ 75 ಸಾವಿರ ರೂ. ಮೌಲ್ಯದ ಬೆಳ್ಳಿ, ಬಂಗಾರವನ್ನು ಎಪಿಎಂಸಿ ನವನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶಿಗ್ಗಾಂವ ತಾಲೂಕಿನ ತಡಸ ಗ್ರಾಮದ ಕಮಲಾಪುರ ತಾಂಡಾ ಕೃಷ್ಣಪ್ಪ ಲಚ್ಚಪ್ಪ ಲಮಾಣಿ (38) ಬಂಧಿತ ಆರೋಪಿ. ಪೋಲಿಸ್ ಆಯುಕ್ತ ಆರ್ .ದಿಲೀಪ್ ಮಾರ್ಗದರ್ಶನದಲ್ಲಿ ಪೋಲಿಸ್ ಇನ್ಸ್ಪೆಕ್ಟರ್ ಪ್ರಭುಸೂರಿನ, ಎ.ಎಸ್.ಐ ಎಂ.ಹೆಚ್.ಶಿವರಾಜ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿ ನವನಗರದ ಪೋಸ್ಟ್ ಆಫೀಸ್ ಬಳಿ ಬಂಧಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಪಂಚಾಕ್ಷರಿ ನಗರ, ಶಿವಾನಂದ ನಗರದಲ್ಲಿ ಆದ ಮನೆ ಕಳ್ಳತನದ ಬಗ್ಗೆ ಒಪ್ಪಿಕೊಂಡಿದ್ದಾನೆ.
ಈತನಿಂದ 75 ಸಾವಿರ ರೂ. ಮೌಲ್ಯದ ಬೆಳ್ಳಿ, ಬಂಗಾರದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇನ್ನೂ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಆಯುಕ್ತರು ಸೂಕ್ತ ಬಹುಮಾನ ಘೋಷಣೆ ಮಾಡಿದ್ದಾರೆ.