ಧಾರವಾಡ: ಸರಣಿ ಅಪಘಾತ ಸಂಭವಿಸಿದ ಪರಿಣಾಮ ಏಳು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಡ್ರೈವರ್ ಲಕ್ಷ್ಮಣ್ಗೌಡ್ (35) ಮೃತಪಟ್ಟಿದ್ದಾರೆ. ಮೃತರನ್ನು ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ.
ಧಾರವಾಡ-ಬೆಳಗಾವಿ ರಸ್ತೆಯಲ್ಲಿ ಪೆಪ್ಸಿ ಕಾರ್ಖಾನೆ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಬಳಿಕ ಎದುರಿಗೆ ಬರುತ್ತಿದ್ದ ಟಾಟಾ ಏಸ್ಗೆ ಡಿಕ್ಕಿ ಹೊಡೆದಿದೆ. ಬಳಿಕ ಬೈಕ್ಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.
![seven-people-injured-in-road-accident-in-dharvada](https://etvbharatimages.akamaized.net/etvbharat/prod-images/5704398_thum.jpg)
ಬೆಳಗಾವಿ ಕಡೆಯಿಂದ ಕಾರು ಬರುತ್ತಿತ್ತು ಎನ್ನಲಾಗಿದ್ದು, ಅಪಘಾತದಲ್ಲಿ ಕಾರು ಪಲ್ಟಿಯಾಗಿದೆ. ಗಾಯಾಳುಗಳನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಧಾರವಾಡ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.