ETV Bharat / state

ಶಕ್ತಿ ಯೋಜನೆ: ಜೂನ್ ತಿಂಗಳು ವಾಯವ್ಯ ರಸ್ತೆ ಸಾರಿಗೆ ಬಸ್​ಗಳಲ್ಲಿ 2.55 ಕೋಟಿ ಮಹಿಳೆಯರು ಪ್ರಯಾಣ...! - ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಆರು ಜಿಲ್ಲೆಗಳ 9 ಸಾರಿಗೆ ವಿಭಾಗಗಳ ಬಸ್​ಗಳಲ್ಲಿ ಜೂನ್ 11ರಿಂದ 30ರ ವರೆಗೆ 20 ದಿನಗಳ ಅವಧಿಯಲ್ಲಿ 2,55,04,851 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಮಹಿಳೆಯರ ಪ್ರಯಾಣದ ಟಿಕೆಟ್ ಮೌಲ್ಯ 64 ಕೋಟಿ ರೂ.

nwkrtc bus
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್
author img

By

Published : Jul 1, 2023, 9:56 PM IST

ಹುಬ್ಬಳ್ಳಿ: ರಾಜ್ಯ ಸರ್ಕಾರದ ಜಾರಿಗೆ ತಂದಿರುವ ಶಕ್ತಿ ಯೋಜನೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್​ಗಳಲ್ಲಿ ಜೂನ್ ತಿಂಗಳಲ್ಲಿ ಒಟ್ಟು 2.55 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 64.93 ಕೋಟಿಗಳಾಗಿದೆ.

ಮಹಿಳಾ ಸಬಲೀಕರಣ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಆರಂಭಿಸಿದ ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್​​​ನಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣದ "ಶಕ್ತಿ" ಯೋಜನೆಗೆ ನಿರೀಕ್ಷೆಗೂ ಮೀರಿ ಭಾರಿ ಸ್ಪಂದನೆ ವ್ಯಕ್ತವಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಆರು ಜಿಲ್ಲೆಗಳ 9 ಸಾರಿಗೆ ವಿಭಾಗಗಳ ಬಸ್​​ಗಳಲ್ಲಿ ಜೂನ್ 11ರಿಂದ 30 ರ ವರೆಗೆ 20 ದಿನಗಳ ಅವಧಿಯಲ್ಲಿ ಒಟ್ಟು 2,55,04,851 ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 64,93,44,818 ಗಳಾಗಿದೆ.

ಶಕ್ತಿ ಯೋಜನೆ ಜಾರಿಯಾದ ನಂತರ ಮಹಿಳಾ ಪ್ರಯಾಣಿಕರ ಜೊತೆಗೆ ಪುರುಷ ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳವಾಗಿದ್ದು ಒಟ್ಟಾರೆ ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಶಕ್ತಿ ಯೋಜನೆ ಜಾರಿಗೆ ಮೊದಲು ಜೂನ್ 1ರಿಂದ 10 ರ ವರೆಗೆ ಮಹಿಳೆಯರು ಹಾಗೂ ಪುರುಷರು ಸೇರಿದಂತೆ ಒಟ್ಟು 174.84 ಲಕ್ಷ ಜನರು ಪ್ರಯಾಣ ಮಾಡಿದ್ದರು. ಪ್ರತಿದಿನ ಸರಾಸರಿ17.48 ಲಕ್ಷ ಗಳಾಗಿತ್ತು. ಯೋಜನೆ ಜಾರಿಯಾದ ನಂತರ ಜೂನ್ 11 ರಿಂದ 30 ರ ವರೆಗೆ 20 ದಿನಗಳ ಅವಧಿಯಲ್ಲಿ 2.55 ಕೋಟಿ ಮಹಿಳೆಯರು ಹಾಗೂ 2.18 ಕೋಟಿ ಪುರುಷರು ಸೇರಿದಂತೆ ಒಟ್ಟು 4.74 ಕೋಟಿ ಜನರು ಪ್ರಯಾಣ ಮಾಡಿದ್ದಾರೆ. ಪ್ರತಿದಿನ ಪ್ರಯಾಣ ಮಾಡಿದ ಸರಾಸರಿ ಒಟ್ಟು ಪ್ರಯಾಣಿಕರ ಸಂಖ್ಯೆ 23.68 ಲಕ್ಷಕ್ಕೆ ಏರಿಕೆಯಾಗಿದೆ. ಯೋಜನೆ ಜಾರಿಗೆ ಮೊದಲು ಒಟ್ಟು ಪ್ರಯಾಣಿಕರಲ್ಲಿ ಮಹಿಳೆಯರ ಪ್ರಮಾಣ ಶೇಕಡಾ 40 ರಿಂದ 45 ರಷ್ಟು ಎಂದು ಅಂದಾಜಿಸಲಾಗಿತ್ತು. ಈಗ ಅದು ಶೇಕಡಾ 55 ರಿಂದ 60ಕ್ಕೆ ಏರಿಕೆಯಾಗಿದೆ.

ಸುರಕ್ಷತೆಗೆ ಆದ್ಯತೆ: ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ಸುರಕ್ಷಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಥೆಯಲ್ಲಿ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ. ಕೇಂದ್ರ ಕಚೇರಿಯ ಹಿರಿಯ ಅಧಿಕಾರಿಗಳು, ಎಲ್ಲ ವಿಭಾಗಗಳ ನಿಯಂತ್ರಣಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳೊಂದಿಗೆ ನಿರಂತರ ಸಭೆಗಳನ್ನು ನಡೆಸುವ ಮೂಲಕ ಸಕಾಲಿಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿದೆ

ಅಗತ್ಯಕ್ಕೆ ತಕ್ಕಂತೆ ಬಸ್​ಗಳ ಸುಗಮ ಸಂಚಾರ ಕಾರ್ಯಾಚರಣೆ ಮೇಲ್ವಿಚಾರಣೆಗಾಗಿ ಬಸ್ ನಿಲ್ದಾಣಗಳಿಗೆ ಅಧಿಕಾರಿ, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾನೂನು ಮತ್ತು ಸುರಕ್ಷತೆಯ ದೃಷ್ಡಿಯಿಂದ ಬಸ್ ನಿಲ್ದಾಣಗಳಿಗೆ ಪೊಲೀಸ್ ಇಲಾಖೆಯಿಂದ ಸಿಬ್ಬಂದಿ ನಿಯೋಜನೆಗೆ ಕ್ರಮ ವಹಿಸಲಾಗಿದೆ ಎಂದು ಪ್ರಕಟಣೆಯಲ್ಲಿ ವಾಯವ್ಯ ಸಾರಿಗೆ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ : ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ‌ಮೂರು ಈಡೇರಿದೆ: ದಿನೇಶ್‌ ಗುಂಡೂರಾವ್‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.