ಹುಬ್ಬಳ್ಳಿ : ಜಲಪಾತದಲ್ಲಿ ಮುಳುಗುತ್ತಿದ್ದ ಮೂವರನ್ನು ರಕ್ಷಿಸಿ ಸಾಹಸ ಮೆರೆದಿದ್ದ ಹುಬ್ಬಳ್ಳಿಯ ನವನಗರದ ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿ ಆದಿತ್ಯ ಎಂ. ಶಿವಳ್ಳಿ ಅವರು, ಭಾರತೀಯ ಮಕ್ಕಳ ಕಲ್ಯಾಣ ಪರಿಷತ್ತು (ಐಸಿಸಿಡಬ್ಲ್ಯೂ) ಗಣರಾಜ್ಯೋತ್ಸವದ ಅಂಗವಾಗಿ ನೀಡುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಈಜುಪಟು ಕೂಡ ಆಗಿರುವ ನಗರದ ಕುಸುಗಲ್ ರಸ್ತೆಯ ಸನ್ ಸಿಟಿ ಹೆರಿಟೇಜ್ ನಿವಾಸಿ ಆದಿತ್ಯ, ಸದ್ಯ ಬಿಬಿಎ–ಎಲ್‌ಎಲ್‌ಬಿ 5ನೇ ಸೆಮಿಸ್ಟರ್ ಓದುತ್ತಿದ್ದಾರೆ. ಆದಿತ್ಯ ಅವರು, ಸಂಕ್ರಾಂತಿ ಅಂಗವಾಗಿ 2020ರ ಜನವರಿ 14ರಂದು ಕುಟುಂಬದೊಂದಿಗೆ ಶಿರಸಿ ಬಳಿಯ ಮೋರೆಗಾರ ಜಲಪಾತಕ್ಕೆ ಪ್ರವಾಸ ಹೋಗಿದ್ದಾಗ, ಮೂವರನ್ನು ರಕ್ಷಿಸಿದ್ದರು. ಆದಿತ್ಯ ಅವರು ಜ. 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರ ನೇಮಕ (ಬೆಂಗಳೂರು): ಜನವರಿ 26 ರಂದು (ನಾಳೆ) ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಬಹುದು: ಸಚಿವರ ಹೆಸರುಗಳ ಮುಂದಿರುವ ಜಿಲ್ಲೆಗಳಲ್ಲಿ ಅವರು ನಾಳೆ ಧ್ವಜಾರೋಹಣ ಮಾಡಲಿದ್ದಾರೆ. ಒಂದು ವೇಳೆ ಅನಾರೋಗ್ಯ ಅಥವಾ ಇತರ ಕಾರಣಗಳಿಂದಾಗಿ ಸಚಿವರು ಧ್ವಜಾರೋಹಣ ಕಾರ್ಯಕ್ರಮಕ್ಕೆ ಗೈರು ಹಾಜರಿ ಆದಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ಮಾಡಬಹುದು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಭಾರಿ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಎಂ ಕಾರಜೋಳ- ಬೆಳಗಾವಿ. ಸಾರಿಗೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮಲು- ಬಳ್ಳಾರಿ. ವಸತಿ, ಮೂಲ ಸೌಕರ್ಯಾಭಿವೃದ್ಧಿ ಸಚಿವ ವಿ. ಸೋಮಣ್ಣ- ಚಾಮರಾಜನಗರ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಎಸ್- ಉಡುಪಿ. ಗೃಹ ಸಚಿವ ಆರಗ ಜ್ಞಾನೇಂದ್ರ- ತುಮಕೂರು. ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ. ಎನ್. ಅಶ್ವತ್ಥ್ನಾರಾಯಣ- ರಾಮನಗರ.
ಲೋಕೋಪಯೋಗಿ ಸಚಿವ ಸಿ. ಸಿ ಪಾಟೀಲ್- ಗದಗ. ಪ್ರವಾಸೋದ್ಯಮ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಆನಂದ್ ಸಿಂಗ್- ಕೊಪ್ಪಳ. ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ- ಉತ್ತರ ಕನ್ನಡ.
ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್- ಯಾದಗಿರಿ. ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ- ಕಲಬುರಗಿ. ಕಾರ್ಮಿಕ ಸಚಿವ ಅರಬೈಲ್ ಹೆಬ್ಬಾರ್ ಶಿವರಾಮ್- ಹಾವೇರಿ. ಸಹಕಾರ ಸಚಿವ ಎಸ್. ಟಿ ಸೋಮಶೇಖರ್- ಮೈಸೂರು.
ಕೃಷಿ ಸಚಿವ ಬಿ. ಸಿ ಪಾಟೀಲ್- ಚಿತ್ರದುರ್ಗ. ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್- ದಾವಣಗೆರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್- ಬೆಂಗಳೂರು ಗ್ರಾಮಾಂತರ. ಅಬಕಾರಿ ಸಚಿವ ಕೆ. ಗೋಪಾಲಯ್ಯ- ಹಾಸನ. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ- ವಿಜಯನಗರ. ಪೌರಾಡಳಿತ, ಸಣ್ಣ ಕೈಗಾರಿಕೆಗಳು, ಸಾರ್ವಜನಿಕ ವಲಯ ಉದ್ಯಮಗಳ ಸಚಿವ ಎನ್. ನಾಗರಾಜು (ಎಂ.ಟಿ.ಬಿ)- ಚಿಕ್ಕಬಳ್ಳಾಪುರ.
ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ. ಸಿ ನಾರಾಯಣಗೌಡ- ಶಿವಮೊಗ್ಗ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ. ಸಿ ನಾಗೇಶ್- ಕೊಡಗು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್- ದಕ್ಷಿಣ ಕನ್ನಡ.
ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರು ಮತ್ತು ಹಿರಿಯ ನಾಗರೀಕ ಸಬಲೀಕರಣ ಸಚಿವ ಹಾಲಪ್ಪ ಆಚಾರ್- ಧಾರವಾಡ. ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ- ರಾಯಚೂರು.
ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ- ಕೋಲಾರ.ಕಂದಾಯ ಸಚಿವ ಆರ್. ಅಶೋಕ್- ಮಂಡ್ಯ. ಜಿಲ್ಲಾಧಿಕಾರಿಗಳು, ವಿಜಯಪುರ ಜಿಲ್ಲೆ- ವಿಜಯಪುರ. ಜಿಲ್ಲಾಧಿಕಾರಿಗಳು, ಬೀದರ್ ಜಿಲ್ಲೆ- ಬೀದರ್. ಜಿಲ್ಲಾಧಿಕಾರಿಗಳು, ಚಿಕ್ಕಮಗಳೂರು ಜಿಲ್ಲೆ- ಚಿಕ್ಕಮಗಳೂರು. ಜಿಲ್ಲಾಧಿಕಾರಿಗಳು, ಬಾಗಲಕೋಟೆ ಜಿಲ್ಲೆ- ಬಾಗಲಕೋಟೆ.
ಓದಿ : ರಾಜ್ಯದ 20 ಪೊಲೀಸರಿಗೆ ರಾಷ್ಟ್ರಪತಿ ಸೇವಾ ಪದಕ : ಇಲ್ಲಿದೆ ಪಟ್ಟಿ