ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಡಿಸಿಪಿ ನಡುವಿನ ಶೀತಲ ಸಮರದ ವಿಚಾರ ನನ್ನ ಗಮನಕ್ಕೂ ಬಂದಿದೆ. ಇದ್ರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತೆ. ಹೀಗಾಗಿ ನಾನು ಇಬ್ಬರು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಈ ಬಗ್ಗೆ ಗೃಹ ಸಚಿವರ ಜೊತೆಯೂ ಮಾತನಾಡುತ್ತೇನೆ. ಈ ಸಮಸ್ಯೆ ಆದಷ್ಟು ಬೇಗ ಬಗೆ ಬಗೆಹರಿಸುತ್ತೇವೆ ಎಂದರು.
ಹು-ಧಾ ಪೊಲೀಸ್ ಕಮಿಷನರ್ ಆರ್.ದಿಲೀಪ್ ವಿರುದ್ಧ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಎಂ. ಕೃಷ್ಣಕಾಂತ ಅಸಮಾಧಾನ ಹೊರಹಾಕಿದ್ದಾರೆ. ಐಪಿಎಸ್ ಅಧಿಕಾರಿಯಾದ ನನಗೆ ಅವರ ಭೇಟಿಗೂ ಅವಕಾಶ ನೀಡುತ್ತಿಲ್ಲ ಎಂದು ಡಿಜಿ ಮತ್ತು ಐಜಿಗೆ ಪತ್ರ ಬರೆದಿದ್ದರು.