ಹುಬ್ಬಳ್ಳಿ: ಮುಂಗಾರು ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಶಿವಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.
ನಗರದಲ್ಲಿ ಪ್ರತಿಭಟನೆ ಮಾಡಿದ ಪಕ್ಷದ ಕಾರ್ಯಕರ್ತರು, ಮುಂಗಾರು ಮಳೆಯಿಂದ ರೈತರ ಬೆಳೆಗಳಿಗೆ ಹಾನಿಯಾಗಿ ನಷ್ಟ ಸಂಭವಿಸಿದೆ. ಆದ್ದರಿಂದ ಸರ್ಕಾರ ತಕ್ಷಣ ನೆರವಿಗೆ ಬರಬೇಕು. ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಸರ್ಕಾರ ಬೇಡಿಕೆ ಈಡೇರಿಸದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಶಿವ ಸೇನೆ ಪಕ್ಷದ ರಾಜ್ಯಾಧ್ಯಕ್ಷ ಕುಮಾರ್ ಹಕಾರೆ ಮುಖಂಡರಾದ ಅನಿಲ್ , ಶಿವು ಸೇರಿದಂತೆ ಇನ್ನಿತರ ಇದ್ದರು.