ಧಾರವಾಡ: ತಾಲೂಕಿನ ಸಲಕಿನಕೊಪ್ಪ ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿನ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.
ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ನಾಗಪ್ಪ ಬಡಿಗೇರ ಎಂಬುವವರ ಮನೆಯಲ್ಲಿ ಈ ದುರ್ಘಟನೆ ನಡೆದಿದ್ದು, ಸಾಮಗ್ರಿಗಳು ಸುಟ್ಟು ಹೋಗಿವೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡಿದ್ದರಿಂದ ಅನಾಹುತ ತಪ್ಪಿದೆ. ಮನೆಯಲ್ಲಿ ಅಡುಗೆ ಸಾಮಗ್ರಿಗಳು, ಹಾಸಿಗೆ, ಟಿವಿ ಸೇರಿದಂತೆ ದಿನಬಳಕೆ ವಸ್ತುಗಳು ಸುಟ್ಟು ಕರಕಲಾಗಿವೆ.