ಹುಬ್ಬಳ್ಳಿ: ಶಾರ್ಟ್ ಸರ್ಕ್ಯೂಟ್ನಿಂದಾಗಿ ಗ್ಯಾರೇಜ್ಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ನಗರದ ಬಿಡ್ನಾಳ ಕ್ರಾಸ್ನಲ್ಲಿರುವ ನೋಬಲ್ ಪೇಂಟಿಂಗ್ ಗ್ಯಾರೇಜ್ನಲ್ಲಿ ನಡೆದಿದೆ.
ಮುಲ್ಲಾ ಎಂಬುವವರಿಗೆ ಸೇರಿದ ಪೇಂಟಿಂಗ್ ಗ್ಯಾರೇಜ್ ಇದಾಗಿದ್ದು, ಶಾರ್ಟ್ ಸರ್ಕ್ಯೂಟ್ನಿಂದಾಗಿ ನೋಬಲ್ ಗ್ಯಾರೇಜ್ನಲ್ಲಿದ್ದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಒಂದು ಗಂಟೆಗೂ ಅಧಿಕ ಕಾಲ ಗ್ಯಾರೇಜ್ ಹೊತ್ತಿ ಉರಿದಿದೆ. ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಈ ಘಟನೆಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದ್ದು, ಕಸಬಾ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.