ಹುಬ್ಬಳ್ಳಿ: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ಗೆ ಡಿಸಿಪಿಗಳಿಲ್ಲದೆ ಸೊರಗಿ ಹೋಗಿತ್ತು. ಆದ್ರೆ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಾತ್ಕಾಲಿಕವಾಗಿ ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಶ್ರೀನಾಥ್ ಜೋಶಿಯವರನ್ನು ನೇಮಿಸಿ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ ವಿಭಾಗ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗ ಡಿಸಿಪಿ ಹುದ್ದೆಗಳಿಗೆ ಅಧಿಕಾರಿಗಳಿಲ್ಲದೇ ಅವಳಿ ನಗರದ ಕಾನೂನು ಸುವ್ಯವಸ್ಥೆ ಹದಗೆಡುವ ಸ್ಥಿತಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಶ್ರೀನಾಥ್ ಜೋಶಿಯವರನ್ನು ಪ್ರಭಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ "ಡಿಸಿಪಿಗಳಿಲ್ಲದೇ ಸೊರಗಿದ ಹು-ಧಾ ಪೊಲೀಸ್ ಕಮಿಷನರೇಟ್" ಎಂಬ ಶೀರ್ಷಿಕೆಯಲ್ಲಿ ಈಟಿವಿ ಭಾರತ ವರದಿಯೊಂದನ್ನು ಪ್ರಕಟಿಸಿತ್ತು. ಕೊನೆಗೂ ಎಚ್ಚೆತ್ತ ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಡಿಸಿಪಿ ನೇಮಕ ಮಾಡಿದ್ದು, ಸಾರ್ವಜನಿಕರ ಸಂತಸಕ್ಕೆ ಕಾರಣವಾಗಿದೆ.