ETV Bharat / state

ಹುಬ್ಬಳ್ಳಿ ಪೌರ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸುವ ರಾಷ್ಟ್ರಪತಿಗೆ ಸಿದ್ಧಾರೂಢರ ಬೆಳ್ಳಿಯ ಮೂರ್ತಿ ಅರ್ಪಣೆ - etv bharat kannada

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾಷ್ಟ್ರಪತಿಯವರ ಸ್ವಾಗತಕ್ಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸಜ್ಜುಗೊಂಡಿದೆ.

siddaruda-silver-statue-presented-to-president-as-memento
ಹುಬ್ಬಳ್ಳಿ ಪೌರ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸುವ ರಾಷ್ಟ್ರಪತಿಗೆ ಸಿದ್ಧಾರೂಢರ ಬೆಳ್ಳಿಯ ಮೂರ್ತಿ ಅರ್ಪಣೆ
author img

By

Published : Sep 26, 2022, 10:15 AM IST

ಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಹಿನ್ನೆಲೆಯಲ್ಲಿ ರಾಷ್ಟ್ರದ ಪ್ರಥಮ ಪ್ರಜೆಯ ಸ್ವಾಗತಕ್ಕೆ ವಾಣಿಜ್ಯನಗರಿಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪೌರ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ರಾಷ್ಟ್ರಪತಿಯವರಿಗೆ ಸಿದ್ಧಾರೂಢ ಶ್ರೀಗಳ 900 ಗ್ರಾಂ ತೂಕದ ಬೆಳ್ಳಿಯ ಮೂರ್ತಿಯನ್ನು ನೆನಪಿನ ಕಾಣಿಕೆಯಾಗಿ ನೀಡಲಾಗುತ್ತಿದೆ. ರಾಷ್ಟ್ರಪತಿಯವರ ಸ್ವಾಗತ ಕೋರಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದಾದ್ಯಂತ ಫ್ಲೆಕ್ಸ್​, ಬ್ಯಾನರ್ ರಾರಾಜಿಸುತ್ತಿವೆ.

ಮೈಸೂರು ದಸರಾ ಉದ್ಘಾಟನೆ ಬಳಿಕ ಅಲ್ಲಿಂದ ವಿಶೇಷ ವಿಮಾನದ ಮೂಲಕ ಆಗಮಿಸುತ್ತಿರುವ ರಾಷ್ಟ್ರಪತಿ ಮುರ್ಮು‌ ಅವರು, ಮಧ್ಯಾಹ್ನ 12.45ಕ್ಕೆ ಪಾಲಿಕೆಯಿಂದ ಪೌರ ಸನ್ಮಾನ ಸ್ವೀಕರಿಸಲಿದ್ದಾರೆ. ಹುಬ್ಬಳ್ಳಿಯ ಜಿಮ್ ಖಾನಾ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸುಮಾರು 5 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಕಾರ್ಯಕ್ರಮಕ್ಕೂ ಮುನ್ನ ಪಾಲಿಕೆ ಸದಸ್ಯರ ಜೊತೆ ರಾಷ್ಟ್ರಪತಿಗಳ ಫೋಟೋ ಸೆಷನ್ ನಡೆಯಲಿದೆ. ನಂತರ ರಾಷ್ಟ್ರಪತಿಯವರು ಪೌರ ಸನ್ಮಾನ ಸ್ವೀಕರಿಸಲಿದ್ದಾರೆ. ಇದೇ ವೇಳೆ ರಾಷ್ಟ್ರಪತಿಯವರಿಗೆ ಸಿದ್ಧಾರೂಢರ ಬೆಳ್ಳಿಯ ಮೂರ್ತಿಯನ್ನು ನೆನಪಿನ ಕಾಣಿಕೆಯಾಗಿ ನೀಡಲಾಗುತ್ತಿದೆ.

Siddaruda silver statue presented to President as memento
ಕಾರ್ಯಕ್ರಮದ ವೇದಿಕೆ ಸಿದ್ಧ

ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಜಿಮ್ ಖಾನಾ ಮೈದಾನದ ಬಳಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳಗಳಿಂದ ಪರಿಶೀಲನೆ ನಡೆದಿದೆ. ಹುಬ್ಬಳ್ಳಿ ಕಾರ್ಯಕ್ರಮದ ನಂತರ ಧಾರವಾಡ ಐಐಐಟಿ ಉದ್ಘಾಟನೆಗೆ ತೆರಳಲಿದ್ದಾರೆ.

ಜಗದೀಶ್ ಶೆಟ್ಟರ್‌ಗೆ ವೇದಿಕೆ ಭಾಗ್ಯ: ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಕೊನೆಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ವೇದಿಕೆ ಭಾಗ್ಯ ಸಿಕ್ಕಿದೆ. ಪೌರಸನ್ಮಾನ ಕಾರ್ಯಕ್ರಮದ ವೇದಿಕೆಯ ಮೇಲೆ ಭಾಗವಹಿಸುವ ಗಣ್ಯರ ಪಟ್ಟಿಯಿಂದ ಶೆಟ್ಟರ್ ಹೆಸರನ್ನು ಕೈಬಿಡಲಾಗಿತ್ತು. ಈ ಬಗ್ಗೆ ಆಯೋಜನಕರಿಂದ ಕಡೆಗಣನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಬಳಿಕ ರಾತ್ರೋರಾತ್ರಿ ಗಣ್ಯರ ಪಟ್ಟಿ ಬದಲಾಗಿದ್ದು, ವೇದಿಕೆ ಕಾರ್ಯಕ್ರಮಕ್ಕೆ ಜಗದೀಶ್ ಶೆಟ್ಟರ್‌ಗೆ ಅವಕಾಶ ನೀಡಲಾಗಿದೆ.

ಇನ್ನುಳಿದಂತೆ ರಾಜ್ಯಪಾಲ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಅಶ್ವತ್ಥನಾರಾಯಣ, ಭೈರತಿ ಬಸವರಾಜ, ಹಾಲಪ್ಪ ಆಚಾರ್, ಶಂಕರ ಪಾಟೀಲ ಮುನೇನಕೊಪ್ಪ, ಮೇಯರ್ ಈರೇಶ ಅಂಚಟಗೇರಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಇಂದು ರಾಷ್ಟ್ರಪತಿ ಮುರ್ಮುರಿಂದ ನಾಡಹಬ್ಬ ದಸರಾಗೆ ಚಾಲನೆ.. ವೈವಿಧ್ಯಮಯ ಕಾರ್ಯಕ್ರಮಗಳ ವಿವರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.