ETV Bharat / state

ಧಾರವಾಡ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: 6 ಅಪ್ರಾಪ್ತರು ವಶಕ್ಕೆ - dharwad college student rape case

Dharwad minor girl gangrape case: ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

minor girl gangrape case
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ
author img

By

Published : Dec 27, 2021, 10:02 AM IST

Updated : Dec 27, 2021, 10:23 AM IST

ಧಾರವಾಡ: ನಗರದಲ್ಲಿ ಬೆಳಕಿಗೆ ಬಂದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಆರು ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅತ್ಯಾಚಾರ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಈ ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಧಾರವಾಡದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಯಾಗಿರುವ ಬಾಲಕಿಯನ್ನು ಹೊರವಲಯಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎನ್ನಲಾಗಿದೆ.

ಅತ್ಯಾಚಾರ ಎಸಗಿದವರು ಸಹ ಅಪ್ರಾಪ್ತರಾಗಿದ್ದಾರೆ ಎಂಬ ಮಾಹಿತಿಯಿದೆ. ಈ ಕಾರಣದಿಂದ ಪೊಲೀಸರು ಹೆಚ್ಚಿನ ಮಾಹಿತಿ‌ ನೀಡಲು ನಿರಾಕರಿಸಿದ್ದಾರೆ. ಖಾಸಗಿ ವಿಡಿಯೋ ತೋರಿಸಿ ನಿರಂತರ ಅತ್ಯಾಚಾರ ನಡೆಸಲಾಗಿದೆ ಎನ್ನಲಾಗುತ್ತಿದೆ.

ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಧಾರವಾಡ ಶಹರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಧಾರವಾಡದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್: ಬಾಲಕಿ ವಾಸಿಸುವ ಏರಿಯಾ ಯುವಕರಿಂದಲೇ ಕೃತ್ಯ?

Last Updated : Dec 27, 2021, 10:23 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.