ಧಾರವಾಡ: ಪಾಕ್ ಪರ ಘೋಷಣೆ ಕೂಗಿದ್ದ ಆರೋಪಿಗಳ ಮೇಲೆ ಕೋರ್ಟ್ ಆವರಣದಲ್ಲಿ ಹಲ್ಲೆ ನಡೆದಿತ್ತು. ಆರೋಪಿಗಳ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಪ್ರಕರಣ ದಾಖಲಾಗಿದ್ದಕ್ಕೆ ಇದೀಗ ವಿರೋಧ ವ್ಯಕ್ತವಾಗಿದೆ.
ಧಾರವಾಡದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ್ದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಾಕ್ ಪರ ಘೋಷಣೆ ಕೂಗಿದವರ ರಕ್ಷಣೆಗೆ ಮುಂದಾದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಬಿಜೆಪಿ ನಾಯಕ ಶರಣು ಅಂಗಡಿ ಸೇರಿದಂತೆ ವಿವಿಧ ನಾಯಕರಿಂದ ಮನವಿ ಸಲ್ಲಿಸಲಾಗಿದೆ. ದೇಶವಿರೋಧಿ ಘೋಷಣೆ ಕೂಗಿದವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ದೂರು ದಾಖಲಿಸಿರುವುದನ್ನು ಖಂಡಿಸಿದರು.