ETV Bharat / state

ನೈರುತ್ಯ ರೈಲ್ವೆ ಆದಾಯದಲ್ಲಿ ದಾಖಲೆ ಪ್ರಮಾಣದ ಏರಿಕೆ - ನೈರುತ್ಯ ರೈಲ್ವೆ ಆದಾಯದಲ್ಲಿ ದಾಖಲೆ ಪ್ರಮಾಣದ ಏರಿಕೆ

South Western Railway Revenue: ನೈರುತ್ಯ ರೈಲ್ವೆ ಆದಾಯದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

South Western Railway Revenue
ನೈರುತ್ಯ ರೈಲ್ವೆ ಆದಾಯದಲ್ಲಿ ದಾಖಲೆ
author img

By ETV Bharat Karnataka Team

Published : Nov 4, 2023, 7:34 AM IST

ಹುಬ್ಬಳ್ಳಿ : ನೈರುತ್ಯ ರೈಲ್ವೆ ಇಲಾಖೆಯು ಆದಾಯದಲ್ಲಿ ಅತ್ಯುತ್ತಮ ಬೆಳವಣಿಗೆ ದಾಖಲಿಸಿದೆ. ಈ ವಲಯವು 2023 ರ ಏಪ್ರಿಲ್​ನಿಂದ ಅಕ್ಟೋಬರ್ ಅವಧಿಯಲ್ಲಿ ಶೇ. 10.44% ಹೆಚ್ಚಳದೊಂದಿಗೆ ಒಟ್ಟು 4288.27 ಕೋಟಿ ರೂ.ಗಳ ಆದಾಯವನ್ನು (ಹಂಚಿಕೆ) ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ 3882.93 ಕೋಟಿ ರೂಪಾಯಿ ಸಂಗ್ರಹವಾಗಿತ್ತು.

ನೈರುತ್ಯ ರೈಲ್ವೆಯ ಮೂಲ ಪ್ರಯಾಣಿಕರ ಆದಾಯವು 2023 ರ ಏಪ್ರಿಲ್​ನಿಂದ ಅಕ್ಟೋಬರ್ ಅವಧಿಯಲ್ಲಿ 1801.68 ಕೋಟಿ ರೂ.ಗಳಾಗಿದ್ದು, ಕಳೆದ ವರ್ಷದ ಇದೇ ಅವಧಿಯ 1563.97 ಕೋಟಿ ರೂ.ಗೆ ಹೋಲಿಸಿದರೆ ಶೇ. 15.20% ಹೆಚ್ಚಳವಾಗಿದೆ.

ನೈರುತ್ಯ ರೈಲ್ವೆಯು 2023 ರ ಏಪ್ರಿಲ್​ನಿಂದ ಅಕ್ಟೋಬರ್ ಅವಧಿಯಲ್ಲಿ 27.49 ಮೆಟ್ರಿಕ್ ಟನ್ ಸರಕುಗಳನ್ನು ಲೋಡ್ ಮಾಡುವ ಮೂಲಕ ಶೇ. 11.66% ಹೆಚ್ಚಳದೊಂದಿಗೆ 2741.40 ಕೋಟಿ ರೂ.ಗಳ ಮೂಲ ಸರಕು ಆದಾಯವನ್ನು ಗಳಿಸಿದೆ, ಕಳೆದ ವರ್ಷ ಇದೇ ಅವಧಿಯಲ್ಲಿ 2455.14 ಕೋಟಿ ರೂಪಾಯಿ ಗಳಿಸಿತ್ತು.

ಇದನ್ನೂ ಓದಿ : ನೈರುತ್ಯ ರೈಲ್ವೆ ಮತ್ತೊಂದು ಮಹತ್ವದ ಹೆಜ್ಜೆ. . ರೈಲ್ವೆ ನಿಲ್ದಾಣದಲ್ಲಿ ಕಡಿಮೆ ದರದಲ್ಲಿ ಪ್ರಯಾಣಿಕರಿಗೆ ಆಹಾರ ಪದಾರ್ಥ ವಿತರಣೆ

ವಿಭಾಗಗಳ ಬಿಸಿನೆಸ್ ಡೆವಲಪ್ಮೆಂಟ್ ಯೂನಿಟ್​ಗಳ ಅವಿರತ ಪ್ರಯತ್ನದಿಂದಾಗಿ ಸಮರ್ಪಕವಾದ ಅಸೆಟ್ ಮ್ಯಾನೇಜ್ಮೆಂಟ್ ವ್ಯವಸ್ಥೆಯ ಮೂಲಕ ಸಮಯೋಚಿತ ವ್ಯಾಗನ್ ಪೂರೈಕೆ ಹಾಗೂ ಕಾರ್ಯಾಚರಣೆ ಮತ್ತು ನಿರ್ವಹಣಾ ಸಿಬ್ಬಂದಿಯ ಅಪಾರ ಪ್ರಯತ್ನದ ಫಲವಾಗಿ ಸರಕು ಸಾಗಣೆ ಬೆಳವಣಿಗೆಯಲ್ಲಿ ಪ್ರಗತಿ ಕಂಡುಬರಲು ಸಾಧ್ಯವಾಗಿದೆ. ನೈಋತ್ಯ ರೈಲ್ವೆ ಮಾರ್ಗಗಳ ದ್ವಿಪಥಿಕರಣ ಹಾಗೂ ವಿದ್ಯುದ್ದೀಕರಣವು ಸರಕು ರೈಲುಗಳ ಸಾಗಣೆ ಸಮಯವನ್ನು ಕಡಿಮೆ ಮಾಡಲು, ರೈಲುಗಳ ವರ್ಧಿತ ಚಲನಶೀಲತೆ ಮತ್ತು ವಿಶ್ವಾಸಾರ್ಹತೆಗೆ ಕಾರಣವಾಗಿದೆ.

ಇದನ್ನೂ ಓದಿ : ಆದಾಯ, ಸರಕು ನಿರ್ವಹಣೆಯಲ್ಲಿ ಹೊಸ ದಾಖಲೆ ನಿರ್ಮಿಸಿದ ನೈರುತ್ಯ ರೈಲ್ವೆ

ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾದ ಸಂಜೀವ್ ಕಿಶೋರ್ ಅವರು ಈ ಅನುಕರಣೀಯ ಸಾಧನೆಯಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಏಕಾಏಕಿ ಕೆಲಸದಿಂದ ಕೈಬಿಟ್ಟ ನೈರುತ್ಯ ರೈಲ್ವೆ ಇಲಾಖೆ : ಮಾಧ್ಯಮದವರ ಮುಂದೆ ಬೇಸರ ಹೊರಹಾಕಿದ ಮಾಜಿ ಸೈನಿಕರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.