ETV Bharat / state

ಮೈಸೂರು ದಸರಾ ಪ್ರಯುಕ್ತ ನೈರುತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ: ಹೀಗಿದೆ ವೇಳಾಪಟ್ಟಿ.. - ​ ETV Bharat Karnataka

ಮೈಸೂರು ದಸರಾ ಪ್ರಯುಕ್ತ ವಿಶೇಷ ರೈಲುಗಳ ಸಂಚಾರದ ಬಗ್ಗೆ ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ದಸರಾ ಪ್ರಯುಕ್ತ ನೈರುತ್ಯ ರೈಲ್ವೆಯಿಂದ ವಿಶೇಷ ರೈಲು

author img

By ETV Bharat Karnataka Team

Published : Oct 13, 2023, 9:35 PM IST

ಹುಬ್ಬಳ್ಳಿ : ಮೈಸೂರು ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತೆರವುಗೊಳಿಸಲು ಮೈಸೂರು-ಬೆಂಗಳೂರು ಮತ್ತು ಮೈಸೂರು-ಚಾಮರಾಜನಗರ ನಿಲ್ದಾಣಗಳ ನಡುವೆ ಕಾಯ್ದಿರಿಸದ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ವಲಯ ನಿರ್ಧರಿಸಿದೆ.

ವಿಶೇಷ ರೈಲುಗಳ ಮಾಹಿತಿ ಕೆಳಗಿನಂತಿವೆ :

1. ರೈಲು ಸಂಖ್ಯೆ 06279/06280 ಮೈಸೂರು-ಕೆ.ಎಸ್.ಆರ್ ಬೆಂಗಳೂರು-ಮೈಸೂರು ಕಾಯ್ದಿರಿಸದ ವಿಶೇಷ (5 ಟ್ರಿಪ್ಸ್) :

ರೈಲು ಸಂಖ್ಯೆ 06279 ಮೈಸೂರು-ಕೆ.ಎಸ್.ಆರ್ ಬೆಂಗಳೂರು ವಿಶೇಷ ರೈಲು ಅಕ್ಟೋಬರ್ 20 ರಿಂದ 24, 2023 ರವರೆಗೆ ರಾತ್ರಿ 11:15 ಗಂಟೆಗೆ ಮೈಸೂರು ನಿಲ್ದಾಣದಿಂದ ಹೊರಟು ಮರುದಿನ 02:30 AM ಗಂಟೆಗೆ ಕೆಎಸ್​ಆರ್ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06280 ಕೆಎಸ್​ಆರ್ ಬೆಂಗಳೂರು-ಮೈಸೂರು ವಿಶೇಷ ರೈಲು ಅಕ್ಟೋಬರ್ 21 ರಿಂದ 25, 2023 ರವರೆಗೆ ಮುಂಜಾನೆ 3 ಗಂಟೆಗೆ ಕೆಎಸ್​ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು ಅದೇ ದಿನ ಬೆಳಿಗ್ಗೆ 06:15 ಗಂಟೆಗೆ ಮೈಸೂರು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ನಾಗನಹಳ್ಳಿ, ಶ್ರೀರಂಗಪಟ್ಟಣ, ಪಾಂಡವಪುರ, ಚಂದ್ರಗಿರಿ ಕೊಪ್ಪಳ ಹಾಲ್ಟ್, ಬ್ಯಾಡ್ರಹಳ್ಳಿ, ಯಲಿಯೂರು, ಮಂಡ್ಯ, ಹನಕೆರೆ, ಮದ್ದೂರು, ಶೆಟ್ಟಿಹಳ್ಳಿ, ಚನ್ನಪಟ್ಟಣ, ರಾಮನಗರಂ, ಬಿಡದಿ, ಹೆಜ್ಜಾಲ, ಕೆಂಗೇರಿ ಮತ್ತು ನಾಯಂಡಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ವಿಶೇಷ ರೈಲುಗಳಲ್ಲಿ ಎಸಿ ಚೇರ್ ಕಾರ್ (1), ನಾನ್ ಎಸಿ ಚೇರ್ ಕಾರ್ (18) ಮತ್ತು 2ನೇ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್/ ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ (2) ಸೇರಿದಂತೆ ಒಟ್ಟು 21 ಬೋಗಿಗಳು ಹೊಂದಿರುತ್ತವೆ.

2. ರೈಲು ಸಂಖ್ಯೆ 06597/06598 ಮೈಸೂರು-ಕೆ.ಎಸ್.ಆರ್ ಬೆಂಗಳೂರು-ಮೈಸೂರು ಕಾಯ್ದಿರಿಸದ ವಿಶೇಷ (5 ಟ್ರಿಪ್ಸ್) :

ರೈಲು ಸಂಖ್ಯೆ 06597 ಮೈಸೂರು-ಕೆಎಸ್​ಆರ್ ಬೆಂಗಳೂರು ವಿಶೇಷ ರೈಲು ಅಕ್ಟೋಬರ್ 20 ರಿಂದ 24, 2023 ರವರೆಗೆ ಮಧ್ಯಾಹ್ನ 12:15 ಗಂಟೆಗೆ ಮೈಸೂರು ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 03:30 ಗಂಟೆಗೆ ಕೆಎಸ್​ಆರ್ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ.

ಹಿಂದಿರುಗುವ ದಿಕ್ಕಿನಲ್ಲಿ, ರೈಲು ಸಂಖ್ಯೆ 06598 ಕೆಎಸ್​ಆರ್ ಬೆಂಗಳೂರು-ಮೈಸೂರು ವಿಶೇಷ ರೈಲು ಅಕ್ಟೋಬರ್ 20 ರಿಂದ 24, 2023 ರವರೆಗೆ ಮಧ್ಯಾಹ್ನ 03:45 ಗಂಟೆಗೆ ಕೆಎಸ್​ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು ಅದೇ ದಿನ ಸಂಜೆ 07:20 ಗಂಟೆಗೆ ಮೈಸೂರು ನಿಲ್ದಾಣವನ್ನು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಕೃಷ್ಣದೇವರಾಯ ಹಾಲ್ಟ್, ನಾಯಂಡಹಳ್ಳಿ, ಜ್ಞಾನ ಭಾರತಿ, ಕೆಂಗೇರಿ, ಹೆಜ್ಜಾಲ, ಬಿಡದಿ, ರಾಮನಗರಂ, ಚನ್ನಪಟ್ಟಣ, ಶೆಟ್ಟಿಹಳ್ಳಿ, ಮದ್ದೂರು, ಹನಕೆರೆ, ಮಂಡ್ಯ, ಯಲಿಯೂರು, ಬ್ಯಾಡರಹಳ್ಳಿ, ಚಂದ್ರಗಿರಿ ಕೊಪ್ಪಳ ಹಾಲ್ಟ್, ಪಾಂಡವಪುರ, ಶ್ರೀರಂಗಪಟ್ಟಣ ಮತ್ತು ನಾಗನಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ. ಈ ವಿಶೇಷ ರೈಲುಗಳು 8 ಡೆಮು ಕಾರ್ ಬೋಗಿಗಳನ್ನು ಹೊಂದಿರುತ್ತವೆ.

3. ರೈಲು ಸಂಖ್ಯೆ 06281/06282 ಮೈಸೂರು-ಚಾಮರಾಜನಗರ-ಮೈಸೂರು ಕಾಯ್ದಿರಿಸದ ವಿಶೇಷ (1 ಟ್ರಿಪ್) :

ರೈಲು ಸಂಖ್ಯೆ 06281 ಮೈಸೂರು-ಚಾಮರಾಜನಗರ ವಿಶೇಷ ರೈಲು ಅಕ್ಟೋಬರ್ 24, 2023 ರಂದು ರಾತ್ರಿ 11:30 ಗಂಟೆಗೆ ಮೈಸೂರಿನಿಂದ ಹೊರಟು ಮರುದಿನ 01:15 AM ಗಂಟೆಗೆ ಚಾಮರಾಜನಗರ ನಿಲ್ದಾಣವನ್ನು ತಲುಪಲಿದೆ.

ಅದೇ ರೀತಿ, ಹಿಂದಿರುಗುವ ದಿಕ್ಕಿನಲ್ಲಿ ಈ ರೈಲು (06282) ಅಕ್ಟೋಬರ್ 25, 2023 ರಂದು ಬೆಳಿಗ್ಗೆ 5 ಗಂಟೆಗೆ ಚಾಮರಾಜನಗರದಿಂದ ಹೊರಟು ಅದೇ ದಿನ ಬೆಳಿಗ್ಗೆ 06:50 ಕ್ಕೆ ಮೈಸೂರು ತಲುಪಲಿದೆ. ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಚಾಮರಾಜಪುರಂ, ಅಶೋಕಪುರಂ, ಕಡಕೋಳ, ತಾಂಡವಪುರ ಹಾಲ್ಟ್, ಸುಜಾತಾಪುರಂ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ್ ಗಂಗವಾಡಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ವಿಶೇಷ ರೈಲುಗಳು ಸಾಮಾನ್ಯ ದ್ವಿತೀಯ ದರ್ಜೆ (13) ಮತ್ತು 2ನೇ ದರ್ಜೆ ಲಗೇಜ್ ಕಂ ಬ್ರೇಕ್ ವ್ಯಾನ್/ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ (2) ಸೇರಿದಂತೆ ಒಟ್ಟು 15 ಬೋಗಿಗಳನ್ನು ಹೊಂದಿರುತ್ತವೆ.

4. ರೈಲು ಸಂಖ್ಯೆ 06283/06284 ಮೈಸೂರು-ಚಾಮರಾಜನಗರ-ಮೈಸೂರು ಕಾಯ್ದಿರಿಸದ ವಿಶೇಷ (1 ಟ್ರಿಪ್) :

ರೈಲು ಸಂಖ್ಯೆ 06283 ಮೈಸೂರು-ಚಾಮರಾಜನಗರ ವಿಶೇಷ ರೈಲು ಅಕ್ಟೋಬರ್ 24, 2023 ರಂದು ರಾತ್ರಿ 09:15 ಗಂಟೆಗೆ ಮೈಸೂರಿನಿಂದ ಹೊರಟು ಅದೇ ದಿನ ರಾತ್ರಿ 11:10 ಕ್ಕೆ ಚಾಮರಾಜನಗರವನ್ನು ತಲುಪಲಿದೆ.

ಅದೇ ರೀತಿ, ಹಿಂದಿರುಗುವ ದಿಕ್ಕಿನಲ್ಲಿ ಈ ರೈಲು (06284) ಅಕ್ಟೋಬರ್ 24, 2023 ರಂದು ರಾತ್ರಿ 11:30 ಗಂಟೆಗೆ ಚಾಮರಾಜನಗರದಿಂದ ಹೊರಟು ಮರುದಿನ 01:30 AM ಗಂಟೆಗೆ ಮೈಸೂರು ತಲುಪಲಿದೆ. ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಚಾಮರಾಜಪುರಂ, ಅಶೋಕಪುರಂ,ಕಡಕೋಳ, ತಾಂಡವಪುರ ಹಾಲ್ಟ್, ಸುಜಾತಾಪುರಂ ಹಾಲ್ಟ್, ನಂಜನಗೂಡು ಟೌನ್, ಚಿನ್ನದಗುಡಿಹುಂಡಿ ಹಾಲ್ಟ್, ನರಸಾಂಬುಧಿ ಹಾಲ್ಟ್, ಕವಲಂದೆ ಹಾಲ್ಟ್, ಕೊಣನೂರು ಹಾಲ್ಟ್, ಬದನಗುಪ್ಪೆ ಹಾಲ್ಟ್ ಮತ್ತು ಮರಿಯಾಲ್ ಗಂಗವಾಡಿ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಈ ವಿಶೇಷ ರೈಲುಗಳಲ್ಲಿ ಎಸಿ ಚೇರ್ ಕಾರ್ (1), ನಾನ್ ಎಸಿ ಚೇರ್ ಕಾರ್ ಸಿಟಿಂಗ್ (9), ಜನರಲ್ ಸೆಕೆಂಡ್ ಕ್ಲಾಸ್ (9) ಮತ್ತು 2ನೇ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್/ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ (2) ಸೇರಿದಂತೆ 21 ಬೋಗಿಗಳು ಹೊಂದಿರುತ್ತವೆ. ಎಸಿ ಚೇರ್ ಕಾರ್ ಬೋಗಿಗಳು ಲಾಕ್ ಸ್ಥಿತಿಯಲ್ಲಿರುತ್ತವೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮೈಸೂರು ದಸರಾ: 'ಅಂಬಾರಿ ಡಬಲ್ ಡೆಕ್ಕರ್' ಬಸ್‌ನಲ್ಲಿ ಕುಳಿತು ಆಕರ್ಷಕ ದೀಪಾಲಂಕಾರ ನೋಡಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.