ETV Bharat / state

ಧಾರವಾಡ: ಮಾಸ್ಕ್ ಧರಿಸದ ಸಾರ್ವಜನಿಕರಿಂದ 30 ಲಕ್ಷ ರೂ. ದಂಡ ವಸೂಲಿ - Dharwad DC nitesh k patil news

ಮಾಸ್ಕ್ ಧರಿಸದವರಿಗೆ ದಂಡ ವಿಧಿಸುವ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸುವ ಸಲುವಾಗಿ ನಾಳೆ ದಾವಣಗೆರೆ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಹೇಳಿದರು.

DC meeting
DC meeting
author img

By

Published : Sep 24, 2020, 2:45 PM IST

ಧಾರವಾಡ: ಕೊರೊನಾ ವೈರಸ್ ನಿಯಂತ್ರಣಕ್ಕೆ ಮಾಸ್ಕ್ ಬಳಕೆ ಕಡ್ಡಾಯವಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಮಾಡದವರಿಂದ 30 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ. ದಂಡ ವಿಧಿಸುವ ಕಾರ್ಯವನ್ನು ಇನ್ನಷ್ಟು ಚುರುಕುಗೊಳಿಸುವ ಸಲುವಾಗಿ ನಾಳೆ ಜಿಲ್ಲೆಯ ನಗರ, ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾ ಆರೋಗ್ಯ ಕಾರ್ಯ ಪಡೆ ಸಭೆಯಲ್ಲಿ ಮಾತನಾಡಿದ ಅವರು, ಮಾಸ್ಕ್ ಬಳಕೆಯಿಂದ ಕೊರೊನಾ ಹರಡುವಿಕೆ ನಿಯಂತ್ರಿಸಬಹುದು ಎಂದು ಈಗಾಗಲೇ ವೈದ್ಯಕೀಯವಾಗಿ ದೃಢಪಟ್ಟಿದೆ. ಮಾರುಕಟ್ಟೆ, ಹೋಟೆಲ್, ಅಂಗಡಿ- ಮುಂಗಟ್ಟು, ಸಾರ್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ್ ಬಳಕೆ ಮಾಡುವುದು ಕಡ್ಡಾಯವಾಗಿದೆ. ಈ ನಿಯಮ ಉಲ್ಲಂಘಿಸಿದರೆ ನಗರ ಪ್ರದೇಶಗಳಲ್ಲಿ 200 ರೂ. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 100 ರೂ.ದಂಡ ವಿಧಿಸಲು ಸರ್ಕಾರ ಸೂಚಿಸಿದೆ. ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ದಂಡ ವಿಧಿಸಲು ಪೊಲೀಸ್, ಮಹಾನಗರಪಾಲಿಕೆ, ನಗರ ಮತ್ತು ಗ್ರಾಮೀಣ ಸ್ಥಳೀಯ ಕಂದಾಯ ಸಂಸ್ಥೆಗಳು ಸೇರಿದಂತೆ ಸಂಬಂಧಿಸಿದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡಗಳು ಅವಳಿನಗರ ಎಲ್ಲಾ ತಾಲೂಕು ಕೇಂದ್ರಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಿವೆ ಎಂದರು.

ಇನ್ನು ಸಂಗ್ರಹವಾದ ಶುಲ್ಕದ ಮಾಹಿತಿಯನ್ನು ಗೂಗಲ್ ಸ್ಪ್ರೆಡ್ ಶೀಟ್ ನಲ್ಲಿ ಕಾಲಕಾಲಕ್ಕೆ ನವೀಕರಿಸಲಾಗುವುದು. ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ದಂಡ ಶುಲ್ಕದ ರಸೀದಿಗಳ ಪುಸ್ತಕಗಳನ್ನು ಒದಗಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಚಿಕಿತ್ಸೆಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಆಕ್ಸಿಜನ್ ಪೂರೈಕೆ, ವೆಂಟಿಲೇಟರ್ ವ್ಯವಸ್ಥೆ ಬಗ್ಗೆ ಸರ್ಕಾರ ನೀಡುವ ನಿರ್ದೇಶನಗಳನ್ನು ಅನುಸರಿಸಲಾಗುತ್ತಿದೆ. ಬೇರೆ ಜಿಲ್ಲೆಯ ಸೋಂಕಿತರು ಇಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಕೂಡ ಅವರ ಸರಿಯಾದ ವಿಳಾಸ, ತಾಲೂಕು, ಜಿಲ್ಲೆಯ ಮಾಹಿತಿಯನ್ನು ದಾಖಲಿಸಬೇಕು. ಈ ಕುರಿತು ಅರಿವು ಮೂಡಿಸಬೇಕು ಎಂದರು.

ಖಾಸಗಿ ಆಸ್ಪತ್ರೆಗಳಿಗೂ ಸರ್ಕಾರದಿಂದ ವೆಂಟಿಲೇಟರ್:

ಸರ್ಕಾರದ ವೈದ್ಯಕೀಯ ಸಂಸ್ಥೆಗಳಲ್ಲಿ ಲಭ್ಯವಿರುವ ವೆಂಟಿಲೇಟರ್, ಹೈ ಫ್ಲೋ ಆಕ್ಸಿಜನ್ ಸರಬರಾಜು ಉಪಕರಣಗಳನ್ನು ಖಾಸಗಿ ಆಸ್ಪತ್ರೆಗಳಿಗೂ ಸಹ ಕೋರಿಕೆ ಮೇರೆಗೆ ಒದಗಿಸಿ, ನೆರವು ನೀಡಲು ಸರ್ಕಾರ ಅವಕಾಶ ನೀಡಿದೆ. ಖಾಸಗಿ ಆಸ್ಪತ್ರೆಗಳು ಈ ಕುರಿತು ಮನವಿ ಸಲ್ಲಿಸಿದರೆ ಕ್ರಮ ವಹಿಸಲಾಗುವುದು. ಜೀವ ರಕ್ಷಣೆಯೇ ಮೊದಲ ಆದ್ಯತೆಯಾಗಿರುವುದರಿಂದ ಸಮರೋಪಾದಿಯಲ್ಲಿ ಪ್ರತಿಯೊಬ್ಬರು ಕರ್ತವ್ಯ ನಿರ್ವಹಿಸಬೇಕು ಎಂದರು.

ಧಾರವಾಡ ಜಿಲ್ಲಾ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ತಲಾ 80 ಆಕ್ಸಿಜನ್ ಸಿಲಿಂಡರ್ ಗಳು ಲಭ್ಯವಿದ್ದು ಸದಾ ಕಾಲ ಅವು ಭರ್ತಿಯಾಗಿರುವಂತೆ ನೋಡಿಕೊಳ್ಳಬೇಕು. ಹಾಗೂ ಖಾಸಗಿ ಆಸ್ಪತ್ರೆಗಳು ಕೋರಿದರೆ ತಾತ್ಕಾಲಿಕವಾಗಿ ಅವರಿಗೆ ನೆರವು ನೀಡಲು ಸಿದ್ಧವಾಗಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.