ಹುಬ್ಬಳ್ಳಿ: ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಶೀಘ್ರದಲ್ಲಿ ಫಲಾನುಭವಿಗಳ ಕೈ ಸೇರಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ಯಾರೂ ಕೂಡ ಆತಂಕ ಪಡುವ ಅವಶ್ಯಕತೆ ಇಲ್ಲ. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಬೇರೆ ಬೇರೆ ಹಂತದಲ್ಲಿ ರಾಜ್ಯದ ಜನರ ಹಿತ ಕಾಯುವ ಸದುದ್ದೇಶದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದೆ. ಒಂದು ಸಾರಿ ಮಾತು ಕೊಟ್ಟ ಮೇಲೆ ಅದು ಫಲಾನುಭವಿಗಳ ಕೈ ಸೇರಲಿದೆ ಎಂದರು.
ರಾಜ್ಯದ ಬೊಕ್ಕಸಕ್ಕೆ ಹಣಕಾಸಿನ ತೊಂದರೆ ಕುರಿತು ಪ್ರತಿಕ್ರಿಯಿಸಿದ ಅವರು, ಸರ್ಕಾರ ಸಂಕಷ್ಟದಲ್ಲೂ ಜನರ ಸಹಾಯಕ್ಕೆ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.