ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಬಿಡುಗಡೆಯಾಗಲಿ ಎಂದು ಅವರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.
ಕಮಲಾಪೂರದ ಪತ್ರೆಪ್ಪಜ್ಜನ ಮಠದಲ್ಲಿ ವಿನಯ್ ಕುಲಕರ್ಣಿ ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿ ಅವರು ಬೇಗ ಜೈಲಿನಿಂದ ಬಿಡುಗಡೆಯಾಗಿ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
ಜಿಲ್ಲೆಯಾದ್ಯಂತ ಸಹ ವಿನಯ್ ಕುಲಕರ್ಣಿ ಬೆಂಬಲಿಗರು ಪೂಜೆ ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐನಿಂದ ನವೆಂಬರ್ 5 ರಂದು ಬಂಧನಕ್ಕೊಳಗಾಗಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿದ್ದಾರೆ.
ಪೂಜೆ ಸಲ್ಲಿಸಿದ ಬಳಿಕ ಅವರ ಬೆಂಬಲಿಗರು ಮಾತನಾಡಿ, ಇದೊಂದು ರಾಜಕೀಯ ಕುತಂತ್ರವಾಗಿದೆ. ಅವರು ಜೈಲಿನಿಂದ ಹೊರಬಂದು ಮತ್ತಷ್ಟು ಬಲಶಾಲಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಿ ಎಂದು ಅವರ ಬೆಂಬಲಿಗರು ಇಂಗಿತ ವ್ಯಕ್ತಪಡಿಸಿದ್ದಾರೆ.
ಓದಿ : ಯುವತಿಯರನ್ನು ಚುಡಾಯಿಸುತ್ತಿದ್ದ ರೋಡ್ ರೋಮಿಯೋಗೆ ಬಿತ್ತು ಗೂಸಾ..ವಿಡಿಯೋ ವೈರಲ್
ಇದೇ ತಿಂಗಳ 6 ರಂದು ಧಾರವಾಡ ಹೈಕೋರ್ಟ್ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅವರು ಬಿಡುಗಡೆಯಾಗಲಿ ಎಂದು ಅವರ ಬೆಂಬಲಿಗರು ಪೂಜೆ ಸಲ್ಲಿಸಿದ್ದಾರೆ.