ETV Bharat / state

ಸಾಮಾಜಿಕ ಜಾಲತಾಣಗಳಲ್ಲಿ ಅನಧಿಕೃತ ಸಂದೇಶಗಳ ರವಾನೆ: ಜಿಲ್ಲಾಡಳಿತದ ಖಡಕ್​ ಎಚ್ಚರಿಕೆ - social networking sites

ಸೋಂಕು ಹೊಂದಿದ ವ್ಯಕ್ತಿಗಳ ಹೆಸರನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಬಗ್ಗೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿರುವ ಜಿಲ್ಲಾಧಿಕಾರಿ ದೀಪಾ ಚೋಳನ್, ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ ಎಂದಿದ್ದಾರೆ.

spread of unofficial messages on social networking sites
ಜಿಲ್ಲಾಧಿಕಾರಿ ದೀಪಾ ಚೋಳನ್
author img

By

Published : Apr 23, 2020, 8:39 PM IST

ಧಾರವಾಡ: ಕೊರೊನಾ ವೈರಸ್ ಸೋಂಕು ಹೊಂದಿದ ವ್ಯಕ್ತಿಗಳ ಹೆಸರು ಹಾಗೂ ವಿಳಾಸದ ವಿವರಗಳ ಮಾಹಿತಿಯನ್ನು 22 ರಂದು ಅನಧಿಕೃತವಾಗಿ ಕೆಲವು ವ್ಯಕ್ತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಧಾರವಾಡ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ಈ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಈ ಮಾಹಿತಿಯು ಖಾಸಗಿ ವ್ಯಕ್ತಿಗಳಿಗೆ ಸಾಮಾಜಿಕ ಜಾಲತಾಣಗಳಿಗೆ ಹಾಕುವುದು ಹಾಗೂ ಈ ಸಂದೇಶವನ್ನು ಅನಧಿಕೃತವಾಗಿ ಹರಡುವುದು ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ 1897 ಹಾಗೂ ಕೋವಿಡ್ ನಿಯಂತ್ರಣ ಕಾಯ್ದೆ 2020 ರ ಅಡಿ ಅಪರಾಧವಾಗಿದೆ.

ಈ ಕುರಿತು ತನಿಖೆ ನಡೆಸಿ ಸೂಕ್ತ ನಿಗಾ ಇರಿಸಿ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಕೋರಿ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.