ಹುಬ್ಭಳ್ಳಿ : ಪೌರತ್ವ ಕಾಯ್ದೆ ಜಾರಿ ಮಾಡಲು ನಿರ್ಧಾರ ಕೈಗೊಂಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ನರೇಂದ್ರ ಮೋದಿಯವರು ಅವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಕೇಂದ್ರ ಸರ್ಕಾರಕ್ಕೆ ಸಾಮಾಜಿಕ ಪರಿವರ್ತನಾ ಸಮಿತಿಯ ಅಧ್ಯಕ್ಷ ಎಸ್.ಆರ್.ಹಿರೇಮಠ ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಎ, ಎನ್ಆರ್ಸಿ ಜಾರಿಗೆ ತರಬೇಕಾದ್ರೇ ಎಲ್ಲರ ಅನುಮತಿ ಪಡೆಯಬೇಕು. ಅವರದೇ ಆದ ನಿಯಮಾವಳಿಗಳಿದ್ದು ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಾಗ ಅದು ದೇಶಕ್ಕೆ ಒಳಿತಾಗಿರಬೇಕು. ದೇಶವೇ ಉರಿದು ಹೋಗಬಾರದು, ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿಗಿಂತಲೂ ಮೀಗಿಲಾಗಿ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಿಷ್ಕ್ರೀಯಗೊಳಿಸುವ ಕಾರ್ಯ ಮಾಡುತ್ತಿರುವುದು ಸರಿಯಲ್ಲ ಎಂದರು.
ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ನೇರ ಹೊಣೆ ಅಮಿತ್ ಶಾ ಕೂಡಲೇ ಅವರನ್ನು ಸಂಪುಟದಿಂದ ಕೈ ಬೀಡಬೇಕು. ಇಲ್ಲವಾದರೆ ಮಹಿಳೆಯರು ಯುವಕರು ವಿಷಪೂರಿತ ಸಿಎಎ ವಿರುದ್ಧ ದೊಡ್ಡಮಟ್ಟದಲ್ಲಿ ಆಂದೋಲನ ಮಾಡಬೇಕಾಗುತ್ತೆ ಎಂದು ಎಚ್ಚರಿಸಿದರು.