ಹುಬ್ಬಳ್ಳಿ: ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ಅವರ ಮೇಲಿನ ನ್ಯಾಯಾಂಗ ನಿಂದನೆ ಪ್ರಕರಣವನ್ನು ಮರು ಪರಿಶೀಲನೆ ಮಾಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್ ಆರ್ ಹಿರೇಮಠ ಒತ್ತಾಯಿಸಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಾಂತ್ ಭೂಷಣ್ ಅವರು ಮಾಡಿದ ಎರಡು ಟ್ವೀಟ್ ಗಳಿಂದ ಸುಪ್ರೀಂಕೋರ್ಟ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿದ್ದು ದುಃಖಕರ ಸಂಗತಿ. ಸರ್ವೋಚ್ಚ ನ್ಯಾಯಾಲಯ ವಾಕ್ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯಬೇಕು. ಪ್ರಶಾಂತ್ ಭೂಷಣ್ ಅವರ ಎರಡು ಟ್ವೀಟ್ ಗಳನ್ನು ಇಟ್ಟುಕೊಂಡು ಅಪರಾಧಿ ಎಂದು ಘೋಷಣೆ ಮಾಡಲಾಗಿದೆ. ಇದನ್ನು ವಿರೋಧಿಸಿ ಸಮಾನ ಮನಸ್ಕ ವೇದಿಕೆಯಿಂದ ಪ್ರತಿಭಟನೆ ಮೂಲಕ ಕೇಸ್ ವಾಪಸ್ ಪಡೆಯಲು ಒತ್ತಾಯಿಸಲಾಗುವದು ಎಂದರು.