ಹುಬ್ಬಳ್ಳಿ: ಜನ ವಿರೋಧಿ ಮೂರು ಕರಾಳ ಕೃಷಿ ಕಾಯಿದೆಯನ್ನು ಕರ್ನಾಟಕ ಸರ್ಕಾರ ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಜನಾಂದೋಲನಗಳ ಮಹಾಮೈತ್ರಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ರಾಜ್ಯಾದ್ಯಂತ ಜನ ಜಾಗೃತಿ ಜಾಥಾ ನಡೆಸಲಾಗುವುದು ಎಂದು ಜನಾಂದೋಲನ ಮಹಾಮೈತ್ರಿ ಮುಖ್ಯಸ್ಥ ಎಸ್.ಆರ್.ಹಿರೇಮಠ ತಿಳಿಸಿದರು.
ನಗರದಲ್ಲಿಂದು ಮಾಧ್ಯಮಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮೂರು ಕರಾಳ ಕೃಷಿ ಕಾಯಿದೆಯನ್ನು ಜನಾಂದೋಲಕ್ಕೆ ಮಣಿದು ರದ್ದುಗೊಳಿಸಿದ್ದು, ಅದೇ ಮಾರ್ಗದಲ್ಲಿ ರಾಜ್ಯ ಸರ್ಕಾರ 2020 ಸೆಪ್ಟೆಂಬರ್ನಲ್ಲಿ ತಿದ್ದುಪಡಿ ತಂದಿರುವ ಕೃಷಿ ಕಾಯಿದೆಯನ್ನು ಕೈಬಿಡಬೇಕಾಗಿದೆ ಎಂದಿದ್ದಾರೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಈ ದಿಸೆಯಲ್ಲಿ ಜನಾಂದೋಲನಗಳ ಮಹಾಮೈತ್ರಿಯಿಂದ 2021 ಡಿ.26 ರಂದು ಮೈಸೂರು ಹಾಗೂ ಧಾರವಾಡದಲ್ಲಿ ಸಾಮಾನ್ಯ ಸಭೆ ನಡೆಸಿ ಕೃಷಿ ಕಾಯಿದೆ ರದ್ಧತಿ ಹಾಗೂ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ನಡೆಸುವ ಹಿನ್ನೆಲೆಯಲ್ಲಿ ಯುವಕರಲ್ಲಿ ಜಾಗೃತಿ ಮೂಡಿಸಲು ಮುಂಬರುವ ರಾಜ್ಯ ಬಜೆಟ್ ಅಧಿವೇಶನದವರೆಗೆ ರಾಜ್ಯಾದ್ಯಂತ ಜನಜಾಗೃತಿ ಜಾಥಾಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಬಸವಕಲ್ಯಾಣ ಮತ್ತು ಮಹದೇಶ್ವರ ಬೆಟ್ಟದಿಂದ ಜಾಥಾ ನಡೆಸಿ ಜನರ ಬೇಡಿಕೆ, ಅಭಿಪ್ರಾಯ ಸಂಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ನಡೆಸಿದ ನಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುತ್ತದೆ ಈ ಮೂಲಕ ಕೃಷಿ ಕಾಯಿದೆ ರದ್ದುಗೊಳಿಸಲು ಒತ್ತಾಯಿಸಲಾಗುವುದು ಎಂದು ಹೇಳಿದರು.