ಹುಬ್ಬಳ್ಳಿ: ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಶ್ರೀ ಕನಕ ಸೇವಾ ಸಮಿತಿ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಇಲ್ಲಿನ ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಬೃಹತ್ ರ‍್ಯಾಲಿ ನಡೆಸಿದ ಅವರು, ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆದು ತಮ್ಮ ಆಕ್ರೋಶ ಹೊರಹಾಕಿದರು. ನಂತರ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನಾಕಾರರು ದಿಢೀರ್ ರಸ್ತೆ ತಡೆಗೆ ಯತ್ನ ನಡೆಸಿದ್ದು, ಹುಬ್ಬಳ್ಳಿ ನಗರದಲ್ಲಿ ಕೆಲ ಸಮಯ ಫುಲ್ ಟ್ರಾಫಿಕ್ ಜಾಮ್ ಆಗಿತ್ತು. ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕುರಿಗಾಯಿ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ಇನ್ನೂ ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಒತ್ತಾಯಿಸಿದ್ದಲ್ಲದೇ, ಮೃತಳ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.