ಧಾರವಾಡ: ಚಂದ್ರಶೇಖರ ಗುರೂಜಿ ನಿಧನ ಹಿನ್ನೆಲೆ ಅವರ ಅಂತ್ಯಸಂಸ್ಕಾರದ ಕಾರ್ಯ ಮುಗಿಸಿಕೊಂಡು ಶಿವಲಿಂಗೇಶ್ವರ ಸ್ವಾಮೀಜಿ ತಮ್ಮ ಕಾರಿನಲ್ಲಿ ವಾಪಸ್ ಆಗುವಾಗ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತಕ್ಕೀಡಾಗಿದೆ.
ಧಾರವಾಡ ತಾಲೂಕಿನ ತೇಗೂರ ಬಳಿ ಕಾರು ಅಪಘಾತಕ್ಕೀಡಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ನಿಡಸೋಶಿ ಮಠದ ಸ್ವಾಮೀಜಿಗಳು ನಿಡಸೋಶಿಗೆ ಮರಳುವಾಗ ಈ ದುರ್ಘಟನೆ ಸಂಭವಿಸಿದೆ. ಸ್ವಾಮೀಜಿಯವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗರಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.