ಹುಬ್ಬಳ್ಳಿ : ಕೊರೊನಾ ವೈರಸ್ ಭೀತಿಯ ನಡುವೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿ ಸಂತಸದಿಂದ ಮನೆಯ ಕಡೆ ತೆರಳುವ ದೃಶ್ಯ ಕಂಡು ಬಂದವು.
ಪರೀಕ್ಷೆ ಮುಗಿಸಿ ಮಾಧ್ಯಮಗಳೊಂದಿಗೆ ತಮ್ಮ ಸಂತಸ ಹಂಚಿಕೊಂಡ ವಿದ್ಯಾರ್ಥಿಗಳು ಕೊರೊನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಓದಿನ ಸಮಸ್ಯೆ ಅನುಭವಿಸಿದ್ರೂ ಕೂಡ ಎಲ್ಲ ಭಯವನ್ನು ಬದಿಗಿಟ್ಟು ಯಶಸ್ವಿಯಾಗಿ ಪರೀಕ್ಷೆ ಬರೆದಿರುವುದಾಗಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಕೊನೆಯ ಪರೀಕ್ಷೆಯಾಗಿರುವ ಹಿನ್ನೆಲೆಯಲ್ಲಿ ಪಾಲಕರು ಮಕ್ಕಳನ್ನು ಕರೆದುಕೊಂಡು ಹೋಗಲು ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದರು. ವಿದ್ಯಾರ್ಥಿಗಳ ಮನಸಿನಲ್ಲಿದ್ದ ಪರೀಕ್ಷಾ ಭಯ ಇಂದಿಗೆ ಕೊನೆಗೊಂಡಿದ್ದು, ವಿದ್ಯಾರ್ಥಿಗಳು ಹರ್ಷದಿಂದಲೇ ಮನೆಯತ್ತ ಮುಖ ಮಾಡಿದರು.