ETV Bharat / state

ಪರೀಕ್ಷೆ: ಬಾಂಬ್ ನಿಷ್ಕ್ರೀಯ ದಳ, ಶ್ವಾನ ದಳದಿಂದ ಪರಿಶೀಲನೆ - ಎಸ್ಸೆಸ್ಸೆಲ್ಸಿ ಪರೀಕ್ಷೆ 2020

ಧಾರವಾಡ ಜಿಲ್ಲಾದ್ಯಂತ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

High security in hubbali
ಶ್ವಾನ ದಳದಿಂದ ಪರಿಶೀಲನೆ
author img

By

Published : Jun 25, 2020, 10:24 AM IST

ಹುಬ್ಬಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಪರೀಕ್ಷಾ ಕೇಂದ್ರಗಳಲ್ಲಿ ಸಿಬ್ಬಂದಿ ಸಾಕಷ್ಟು ಭದ್ರತೆ ‌ಕೈಗೊಂಡಿದ್ದು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದಿಂದ ಪರಿಶೀಲನೆ ನಡೆಸಲಾಯಿತು.

ನಗರದ ಲ್ಯಾಮಿಂಗ್ಟನ್ ಶಾಲೆಯಲ್ಲಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು. ಈ ಶಾಲೆಯಲ್ಲಿ 22 ಬ್ಲಾಕ್​​​​ನಲ್ಲಿ 346 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ 90 ಹಾಗೂ ಹೆಚ್ಚುವರಿಯಾಗಿ 17 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಶ್ವಾನ ದಳದಿಂದ ಪರಿಶೀಲನೆ

ಜಿಲ್ಲಾದ್ಯಂತ 27,841 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕೇಂದ್ರದ ಒಳ ಪ್ರವೇಶಕ್ಕೂ ಮುನ್ನ ಹ್ಯಾಂಡ್​​ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.