ETV Bharat / state

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

author img

By

Published : Jun 25, 2020, 11:20 AM IST

ಧಾರವಾಡ ಜಿಲ್ಲೆಯ ಮಾಳಮಡ್ಡಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್​ ಭೇಟಿ ನೀಡಿ ಪರೀಕ್ಷಾ ಸಿದ್ಧತೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

SSLC exams begin amid Covid-19
ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆ

ಧಾರವಾಡ: ಪರೀಕ್ಷಾ ಸಮಯದಲ್ಲಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಸಮಾನ ಮನಸ್ಕ ಗೆಳೆಯರ ಬಳಗದಿಂದ ಕೆ.ಇ.ಬೋರ್ಡ್ ಶಾಲೆಯ ಹೊರಭಾಗದಲ್ಲಿ ಜಾಗೃತಿ ಮೂಡಿಸಲಾಯಿತು.

ವಿದ್ಯಾರ್ಥಿಯೊಬ್ಬ ಮುಖಕ್ಕೆ ಫೇಸ್​​​ಶೀಲ್ಡ್ ಹಾಕಿಕೊಂಡು ಗಮನ ಸೆಳೆದರು. ನಗರದ ಮಾಳಮಡ್ಡಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ದೀಪಾ ಚೋಳನ್​​ ಭೇಟಿ ನೀಡಿ ಪರೀಕ್ಷಾ ಸಿದ್ಧತೆಗಳನ್ನು ಪರಿಶೀಲಿಸಿದರು.

ಇಲ್ಲಿನ ಬಾಸೆಲ್ ಮಿಷನ್ ಪರೀಕ್ಷಾ ಕೇಂದ್ರದ ಹೊರಭಾಗದಲ್ಲಿ ಮುಖ್ಯ ಶಿಕ್ಷಕರ ದೃಢೀಕರಣ ಪತ್ರ ಇಲ್ಲವೆಂದು 20ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹೊರಹಾಕಿದ ಘಟನೆ ಸಹ ನಡೆದಿದೆ.

ಸಮಾನ ಮನಸ್ಕ ಗೆಳೆಯರ ಬಳಗದಿಂದ ಜಾಗೃತಿ ಮತ್ತು ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

ಮುಖ್ಯ ಶಿಕ್ಷಕರ ದೃಢೀಕರಣ ಪತ್ರ ತಂದರೆ ಮಾತ್ರ ಪರೀಕ್ಷೆಗೆ ಅವಕಾಶ ನೀಡುವುದಾಗಿ ಸಿಬ್ಬಂದಿ ಹೇಳಿದ್ದರು. ಬಳಿಕ ಸ್ವಯಂ ದೃಢೀಕರಣ ಪತ್ರ ಬರೆಸಿಕೊಂಡು ಇಂದಿನ ಪರೀಕ್ಷೆಗೆ ಅವಕಾಶ ಕೊಡಲಾಯಿತು. ಮುಂದಿನ ಪರೀಕ್ಷೆಗೆ ದೃಢೀಕರಣ ಪತ್ರ ತರುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.