ETV Bharat / state

ಮೂಲಭೂತ ಸೌಕರ್ಯ: ಬಜೆಟ್‌ನಲ್ಲಿ ಉ.ಕರ್ನಾಟಕ ಭಾಗಕ್ಕೂ ಆದ್ಯತೆ ನೀಡಲು ಆಗ್ರಹ - ಮೂಲಭೂತ ಸೌಕರ್ಯಗಳಿಗೆ ಉ.ಕರ್ನಾಟಕ ಆದ್ಯತೆ ನೀಡಿ

ರಾಜ್ಯ ಬಜೆಟ್​ನಲ್ಲಿ ಮೂಲಭೂತ ಸೌಕರ್ಯಗಳ ಕುರಿತು ತೆಗೆದಿಡುವ ಅನುದಾನವನ್ನು ಕೇವಲ ಬೆಂಗಳೂರು ಭಾಗದ ಮೂಲಭೂತ ಸೌಕರ್ಯಗಳಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಅಲ್ಲದೇ ಬಹುತೇಕ ಅನುದಾನದ ಶೇ 70-80 ರಷ್ಟು ಪಾಲನ್ನು ಬೆಂಗಳೂರು, ಮೈಸೂರು ಭಾಗದ ಮೂಲಭೂತ ಸೌಕರ್ಯಗಳಿಗಾಗಿ ಬಳಕೆ ಮಾಡಲಾಗುತ್ತದೆ. ಇದನ್ನು ಕೈಬಿಟ್ಟು ಈಗ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಳಕೆ ಮಾಡಬೇಕಿದೆ‌ ಎಂಬ ಒತ್ತಾಯ ಕೇಳಿ ಬಂದಿದೆ.

ರಾಜ್ಯ ಬಜೆಟ್
ರಾಜ್ಯ ಬಜೆಟ್
author img

By

Published : Mar 4, 2021, 7:47 PM IST

ಹುಬ್ಬಳ್ಳಿ: ರಾಜ್ಯ ಸರ್ಕಾರ ಮಂಡಿಸಲಿರುವ ಬಜೆಟ್​ಗೆ ದಿನಗಣನೆ ಪ್ರಾರಂಭವಾಗಿದೆ. ಉತ್ತರ ಕರ್ನಾಟಕ ಭಾಗದ ಜನರು ಆಯವ್ಯಯದ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಅದರಲ್ಲೂ ಧಾರವಾಡ ಜಿಲ್ಲೆಯ ಅವಳಿ ನಗರದ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ದೊಡ್ಡ ಪ್ರಮಾಣದ ಅನುದಾನ ನಿರೀಕ್ಷೆಯಲ್ಲಿ ಜನರಿದ್ದಾರೆ. ಜೊತೆಗೆ ಕಳೆದ ಬಾರಿ ಘೋಷಣೆಯಾಗಿದ್ದ ಯೋಜನೆಗಳ ಜಾರಿಗೂ ಆಗ್ರಹಿಸುತ್ತಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರಾಜ್ಯ ಬಜೆಟ್ ಮೇಲೆ ಉತ್ತರ ಕರ್ನಾಟಕದ ಮಂದಿ ಸಾಕಷ್ಟು ಆಶಾಭಾವನೆ ಇಟ್ಟುಕೊಂಡಿದ್ದಾರೆ. ಈ ಭಾಗದಲ್ಲಿ ನೆನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಅನುದಾನ ನೀಡುವುದರ ಜೊತೆಗೆ ಹೊಸ ಹೊಸ ಯೋಜನೆ ಘೋಷಿಸುವ ನಿರೀಕ್ಷೆ ಹೊಂದಿದ್ದಾರೆ. ಈ ಭಾಗದ ಮಹತ್ವದ ಯೋಜನೆಯಾದ ಕಳಸಾ ಬಂಡೂರಿ, ಮಹದಾಯಿ ನೀರು ಬಳಕೆಗೆ 500 ಕೋಟಿ ರೂ. ಅನುದಾನ ತೆಗೆದಿರಿಸಲಾಗಿತ್ತು.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಹಂಚಿಕೆಯಾಗಿರುವ ನೀರಿನ ಬಳಕೆ ಕುರಿತು ಕೇಂದ್ರ ಸರ್ಕಾರ ಗೆಜೆಟ್‌ನಲ್ಲಿ ಪ್ರಕಟಿಸಿರುವುದು ಬಿಟ್ಟರೆ, ಅನುದಾನ ಮಾತ್ರ ಖರ್ಚಾಗಿಲ್ಲ. ಈ ಬಾರಿಯಾದರೂ ಮಹದಾಯಿ ಯೋಜನೆಗೆ ಬಜೆಟ್​ನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಬೇಕಿದೆ.

ಬಹುನಿರೀಕ್ಷೆಯ ರಾಜ್ಯ ಬಜೆಟ್​ನಲ್ಲಿ ಉ.ಕರ್ನಾಟಕ ಭಾಗಕ್ಕೂ ಆದ್ಯತೆ ನೀಡಲು ಒತ್ತಾಯ

ರಾಜ್ಯ ಬಜೆಟ್​ನಲ್ಲಿ ಮೂಲಭೂತ ಸೌಕರ್ಯಗಳ ಕುರಿತು ತೆಗೆದಿಡುವ ಅನುದಾನವನ್ನು ಕೇವಲ ಬೆಂಗಳೂರು ಭಾಗದ ಮೂಲಭೂತ ಸೌಕರ್ಯಗಳಿಗೆ ಮಾತ್ರ ಬಳಕೆ ಮಾಡಲಾಗುತ್ತದೆ. ಅಲ್ಲದೇ ಅನುದಾನದ ಬಹುತೇಕ ಶೇ 70-80 ರಷ್ಟನ್ನು ಬೆಂಗಳೂರು, ಮೈಸೂರು ಭಾಗದ ಮೂಲಭೂತ ಸೌಕರ್ಯಗಳಿಗಾಗಿ ಬಳಕೆ ಮಾಡಲಾಗುತ್ತದೆ. ಇದನ್ನು ಕೈ ಬಿಟ್ಟು ಈಗ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಳಕೆ ಮಾಡಬೇಕಿದೆ‌ ಎಂಬ ಒತ್ತಾಯ ಕೇಳಿ ಬಂದಿದೆ.

ಮಹಾನಗರ ಪಾಲಿಕೆಯ ನಿವೃತ್ತ ನೌಕರರಿಗೆ ನೀಡಲು 102 ಕೋಟಿ ರೂ. ಪಿಂಚಣಿ ಪಾವತಿಸಬೇಕಿತ್ತು. ಕಾಂಗ್ರೆಸ್‌ ಆಡಳಿತದಲ್ಲಿದ್ದಾಗ ಬಿಜೆಪಿ ನಾಯಕರು, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಕೂಡಲೇ ಪಿಂಚಣಿ ಬಾಕಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿದ್ದರು. ಈ ನಿಟ್ಟಿನಲ್ಲಿ 52 ಕೋಟಿ ರೂ. ಬಿಡುಗಡೆಯಾಗಿದ್ದು, ಇನ್ನೂ 49 ಕೋಟಿ ರೂ. ಬಾಕಿ ಉಳಿದಿದೆ.

ಉತ್ತರ ಕರ್ನಾಟಕದ ಮಹತ್ವಪೂರ್ಣ ಯೋಜನೆಯಲ್ಲಿ ಒಂದಾಗಿರುವ ಬೆಳಗಾವಿ–ಧಾರವಾಡ ಕಿತ್ತೂರು ರೈಲು ಮಾರ್ಗ ನಿರ್ಮಾಣಕ್ಕೆ ಹಸಿರು ನಿಶಾನೆ ದೊರೆತಿದೆ. ಕೇಂದ್ರ ಸರ್ಕಾರವು 50 ಕೋಟಿ ರೂ. ಅನುದಾನ ತೆಗೆದಿರಿಸಿದೆ. ರೈಲು ಮಾರ್ಗ ನಿರ್ಮಾಣಕ್ಕೆ 837 ಎಕರೆ ಭೂಮಿ ಬೇಕಾಗಿದ್ದು, ಅದನ್ನು ರಾಜ್ಯ ಸರ್ಕಾರ ಭೂಸ್ವಾಧೀನ ಪಡಿಸಿಕೊಂಡು ರೈಲ್ವೆ ಇಲಾಖೆಗೆ ಹಸ್ತಾಂತರಿಸಬೇಕು ಎಂಬುದು ಈ ಭಾಗದ ಜನರ ಒತ್ತಾಸೆ. ಅಲ್ಲದೇ ಬಹುದಿನಗಳ ಬೇಡಿಕೆಯಾಗಿರುವ ಹುಬ್ಬಳ್ಳಿ ಅಂಕೋಲಾ ರೈಲು ಮಾರ್ಗಕ್ಕೆ ಈ ಬಾರಿ ಬಜೆಟ್​ನಲ್ಲಿ ಅನುದಾನ ಘೋಷಣೆ ಮಾಡಬೇಕಿದೆ. ಧಾರವಾಡ ಜಿಲ್ಲೆಯಲ್ಲಿ 225 ಹಾಗೂ ಬೆಳಗಾವಿ ಜಿಲ್ಲೆಯಲ್ಲಿ 602 ಎಕರೆ ಭೂಮಿ ಬೇಕಾಗಿದೆ. ಆದರೆ, ಇಲ್ಲಿಯವರೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿಲ್ಲ. ಹಾಗಾಗಿ, ಕಾಮಗಾರಿ ಇನ್ನೂ ಆರಂಭವಾಗಿಲ್ಲ.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ವಿಜ್ಞಾನೇಶ್ವರ ಅಧ್ಯಯನ ಪೀಠ ಆರಂಭಕ್ಕೆ ರಾಜ್ಯ ಸರ್ಕಾರ 1 ಕೋಟಿ ರೂ. ಬಿಡುಗಡೆ ಮಾಡಿದ್ದರೂ ಪೀಠ ಕಾರ್ಯಾರಂಭ ಮಾಡಿಲ್ಲ.

ಜಿಲ್ಲೆಯ ಬಹುತೇಕ ರಸ್ತೆಗಳ ಅಭಿವೃದ್ಧಿಗೆ 1 ಸಾವಿರ ಕೋಟಿ ರೂ. ಅನುದಾನ ನೀಡಬೇಕು ಎಂದು ಜಿಲ್ಲೆಯ ಜನಪ್ರತಿನಿಧಿಗಳು ಮನವಿ ಮಾಡಿಕೊಂಡಿದ್ದರು. ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ತಿಳಿಸಿದ್ದರು. ಈ ಅನುದಾನದ ನಿರೀಕ್ಷೆಯಲ್ಲಿ ಜನರಿದ್ದಾರೆ.

ಇದನ್ನೂ ಓದಿ: ಆಟೋರಿಕ್ಷಾದಲ್ಲಿ ತಯಾರಾದ ಚಿಕ್ಕ ಮನೆ; ಉದ್ಯಮಿ ಆನಂದ್​ ಮಹೀಂದ್ರಾ ಏನಂದ್ರು ಗೊತ್ತಾ?

ಹುಬ್ಬಳ್ಳಿ ಹಾಗೂ ಧಾರವಾಡದಲ್ಲಿ ಶಿಕ್ಷಣ ಪಡೆಯುವುದಕ್ಕಾಗಿ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳ ವಿದ್ಯಾರ್ಥಿಗಳು ಬರುತ್ತಾರೆ. ಅವರಿಗೆ ಸೂಕ್ತ ವಸತಿ ವ್ಯವಸ್ಥೆ ಇಲ್ಲದ್ದರಿಂದಾಗಿ ಶಿಕ್ಷಣದ ವೆಚ್ಚ ಹೆಚ್ಚಾಗುತ್ತಿದೆ. ಹೆಚ್ಚುವರಿಯಾಗಿ ವಸತಿ ನಿಲಯಗಳನ್ನು ಮಂಜೂರು ಮಾಡಬೇಕಿದೆ. ಈ ಬಾರಿ ಬಜೆಟ್​ನಲ್ಲಿ ಸರ್ಕಾರ ಇಂತಹ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಅನುದಾನ ಘೋಷಣೆ ಮಾಡಬೇಕಿದೆ.

ಜಿಲ್ಲೆಯ ಅಳ್ನಾವರ ಹಾಗೂ ಅಣ್ಣಿಗೇರಿಯನ್ನು ಹೊಸ ತಾಲ್ಲೂಕುಗಳಾಗಿ ಘೋಷಣೆ ಮಾಡಿ ಎರಡು ವರ್ಷಗಳಾಗಿದೆ. ಆದರೆ, ಅಲ್ಲಿ ಯಾವುದೇ ಕಚೇರಿಗಳು ಕಾರ್ಯಾರಂಭ ಮಾಡಿಲ್ಲ. ಆ ಕಚೇರಿಗಳಿಗೆ ಜಾಗ ಒದಗಿಸುವ ಹಾಗೂ ಕಟ್ಟಡ ನಿರ್ಮಾಣಕ್ಕೆ ಅನುದಾನ ಬೇಕಿದೆ. ಅದರ ಜೊತೆಗೆ ಅವಳಿ‌ನಗರದ ಹಾಗೂ ಧಾರವಾಡ ಜಿಲ್ಲೆಯ ನೀರಾವರಿ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸಬೇಕು ಎಂಬ ಒತ್ತಾಯ ಕೇಳಿ ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.