ಹುಬ್ಬಳ್ಳಿ : ರಾಜ್ಯ ಸರ್ಕಾರ ಮೂಲಸೌಕರ್ಯಗಳಾದ ಶಿಕ್ಷಣ, ಆರೋಗ್ಯ ಹಾಗೂ ರಸ್ತೆ ನಿರ್ಮಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ರಾಜಕೀಯ ಸಲಹೆಗಾರ ರೋಮಿಬಾಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು ಆಮ್ ಆದ್ಮಿ ಪಕ್ಷ ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾದ ಕಾರ್ಯಕರ್ತರನ್ನು ಭೇಟಿ ಮಾಡಿದರು. ಯಾವ ರೀತಿ ಹೋರಾಟ ಮಾಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು. ಆ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ಹುಬ್ಬಳ್ಳಿ-ಧಾರವಾಡದಲ್ಲಿ ಅನೇಕ ಸಮಸ್ಯೆಗಳನ್ನು ನೋಡಿದ್ದೇನೆ.
ಸ್ಮಾರ್ಟ್ ಸಿಟಿ ಎಂದು ಖ್ಯಾತಿ ಪಡೆದಿರುವ ಹುಬ್ಬಳ್ಳಿ- ಧಾರವಾಡ ಸ್ಮಾರ್ಟ್ ಆಗಿಲ್ಲ. ನಮ್ಮ ದೆಹಲಿ ಸರ್ಕಾರ ಶಿಕ್ಷಣ, ಆರೋಗ್ಯಕ್ಕೆ ಒತ್ತು ಕೊಟ್ಟ ಹಾಗೇ, ಇಲ್ಲಿ ಯಾವುದೇ ಆ ರೀತಿ ಕಾಮಗಾರಿ ಆಗಿಲ್ಲ. ಅದರ ಜೊತೆಗೆ ಸರ್ಕಾರಿ ಶಾಲೆಗಳು ಅವನತಿ ಸ್ಥಿತಿಗೆ ಬಂದಿವೆ.
ಓದಿ:ಹುಬ್ಬಳ್ಳಿ: ರೈಲ್ವೆ ಅಪ್ರೆಂಟಿಸ್ ಮುಗಿಸಿದ ಅಭ್ಯರ್ಥಿಗಳ ನೇಮಕಕ್ಕೆ ಆಗ್ರಹಿಸಿ ಪ್ರತಿಭಟನೆ
ಇಲ್ಲಿನ ಶಿಕ್ಷಕರು ಮಕ್ಕಳಿಗೆ ಹೇಗೆ ಶಿಕ್ಷಣ ನೀಡಬೇಕು ಎಂಬುದು ಮಾಹಿತಿ ಸಹ ಇಲ್ಲ. ಅದರ ಜೊತೆಗೆ ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರು ಸಹ ಯಾವುದೇ ಸರ್ಕಾರಿ ಆಸ್ಪತ್ರೆಯನ್ನು ಹೈಟೆಕ್ ಮಾಡುವ ಕೆಲಸ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಕ್ಷ ನಿರಂತರವಾಗಿ ಇಲ್ಲಿನ ಜ್ವಲಂತ ಸಮಸ್ಯೆಗಳನ್ನು ಎತ್ತಿ ತೋರಿಸುವ ಕೆಲಸ ಮಾಡುತ್ತದೆ. ಮುಂದಿನ ದಿನಗಳಲ್ಲಿ ಪ್ರತಿ ಹಳ್ಳಿಗಳಲ್ಲಿ ಸಹ ನಮ್ಮ ಕಾರ್ಯಕರ್ತರು ಇರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.