ಹುಬ್ಬಳ್ಳಿ: ಸಮ್ಮಿಶ್ರ ಸರ್ಕಾರದ ಎರಡನೇ ಬಜೆಟ್ ಸಂವಿಧಾನ ವಿರೋಧಿಯಾಗಿದೆ. ಈ ಬಜೆಟ್ನಲ್ಲಿ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಿಸಲಾಗಿದೆ ಎಂದು ತೆರಿಗೆ ಸಲಹೆಗಾರ ಎಸ್.ಟಿ. ಅಕ್ಕಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಟಿವಿಯೊಂದಿಗೆ ಮಾತನಾಡಿದ ಅವರು, ಬಜೆಟ್ ಮಂಡನೆಗೂ ಮುನ್ನ ಅದರ ಪ್ರತಿಗಳನ್ನು ಪ್ರತಿಪಕ್ಷದ ಸದಸ್ಯರಿಗೆ ನೀಡಬೇಕಿತ್ತು. ಆದ್ರೆ ಈ ಬಾರಿ ನಿಯಮ ಬದಲಿಸಿರುವುದು ಸಂವಿಧಾನ ವಿರೋಧಿ ಧೋರಣೆ ಎಂದು ಅವರು ಜರಿದರು.
![undefined](https://s3.amazonaws.com/saranyu-test/etv-bharath-assests/images/ad.png)
ಉತ್ತರ ಕರ್ನಾಟಕ ಭಾಗಕ್ಕೆ ಆದ್ಯತೆಯನ್ನು ಈ ಬಜೆಟ್ನಲ್ಲಿ ನೀಡಿಲ್ಲ. ಉತ್ತರ ಕರ್ನಾಟಕದ ಜನರು ಮತ ಹಾಕಿಲ್ಲ ಅಂತ ಸೇಡಿನ ಮನೋಭಾವನೆಯನ್ನು ಸಿಎಂ ಬಜೆಟ್ನಲ್ಲಿ ತೋರಿಸಿದ್ದಾರೆ ಎಂದು ಎಸ್ ಟಿ ಅಕ್ಕಿ ಕಿಡಿಕಾರಿದರು.