ಹುಬ್ಬಳ್ಳಿ : ರಾಜ್ಯಾದ್ಯಂತ SDPI ಮತ್ತು PFI ಮುಖಂಡರ ಮನೆ ಮತ್ತು ಕಚೇರಿಗಳ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿದ್ದು, ಇದರ ಭಾಗವಾಗಿ ಹಳೇ ಹುಬ್ಬಳ್ಳಿಯ ಕಸಬಾಪೇಟ್ ಮತ್ತು ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10ಕ್ಕೂ ಹೆಚ್ಚು SDPI-PFI ಮುಖಂಡರನ್ನು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಸಬಾಪೇಟ್ ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಳು ಜನರನ್ನು ಬಂಧಿಸಿದ್ದು, ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ಫಾರುಕ್, ಸಿಕಂದರ್ ಮತ್ತು ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಅಬ್ಬಾಸಲಿ ಮಂಟಗಣಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಿಪಿಐ ರಮೇಶ್ ಗೋಕಾಕ್ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಸಿಆರ್ಪಿಸಿ 107, 151 ಅಡಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಓದಿ: ರಾಜ್ಯಾದ್ಯಂತ ಪೊಲೀಸರ ಮಿಂಚಿನ ಕಾರ್ಯಾಚರಣೆ.. 40ಕ್ಕೂ ಹೆಚ್ಚು ಪಿಎಫ್ಐ ಕಾರ್ಯಕರ್ತರು ವಶಕ್ಕೆ