ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಮಾಡಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕೆಲಸ ಮಾಡುತ್ತಿದೆ. ಏಪ್ರಿಲ್ 20ರ ನಂತರ ಕೈಗಾರಿಕೆಗಳು ಆರಂಭವಾಗುತ್ತವೆ. ಈಗಾಗಲೇ ಕೈಗಾರಿಕೋದ್ಯಮಿಗಳು ಭೇಟಿ ಮಾಡಿ ಸಮಸ್ಯೆ ಹೇಳಿದ್ದಾರೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕೈಗಾರಿಕೆಗಳು ಆರಂಭವಾಗುತ್ತವೆ. ಜಿಲ್ಲೆಯಲ್ಲಿ ಕೈಗೊಂಡ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ಆರಂಭವಾಗುತ್ತವೆ. ಕೂಲಿ ಕಾರ್ಮಿಕರಿಗೆ ಕ್ಯಾಂಪ್ ಮಾಡಿ ಉದ್ಯೋಗ ಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ತಬ್ಲೀಘಿಗಳಿಂದ ಕೊರೊನಾ ಹೆಚ್ಚಾಗಿದೆ. ಜಿಲ್ಲೆಯಲ್ಲಿ 36 ಪ್ರಕರಣ ಆಗಿವೆ. ತಬ್ಲೀಘಿಗಳು ಅಡಗಿಕೊಂಡು ಕುಳಿತುಕೊಂಡ್ರೆ ಕಾನೂನು ಕ್ರಮ ಜರುಗಿಸಲಾಗುವುದು. ಮನೆಯಲ್ಲಿ ಅಡಗಿ ಕೂರದೇ ಸ್ವಯಂ ಪ್ರೇರಣೆಯಿಂದ ಮುಂದೆ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು. ಕೊರೊನಾ ಯಾವುದೇ ಧರ್ಮ, ಜಾತಿ ನೋಡಿಕೊಂಡು ಬರೋದಿಲ್ಲಾ ಎಂದರು.