ಕಲಘಟಗಿ(ಧಾರವಾಡ): ಪಟ್ಟಣದಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದ್ದು, ಆತ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಪಟ್ಟಣದ ಮಾಚಾಪುರ ತಾಂಡದ ಮಂಜುನಾಥ ವೆಂಕಪ್ಪ ಲಮಾಣಿ ಎಂಬ ಎಂಬ ವಿದ್ಯಾರ್ಥಿಗೆ ಚಾಕುವಿನಿಂದ ಹೊಟ್ಟೆಗೆ ಇರಿಯಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿದೆ. ಸದ್ಯ ವಿದ್ಯಾರ್ಥಿ ಪ್ರಾಣಾಪಾಯದಿಂದ ಪಾರಾಗಿದ್ದು, ಘಟನೆ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಓದಿ: ಪಿಎಸ್ಐಗೇ ಮಕ್ಮಲ್ ಟೋಪಿ ಹಾಕಿದ ಚಾಲಾಕಿ: ಲಕ್ಷಾಂತರ ರೂ. ಕಳೆದುಕೊಂಡ ಕಲಬುರಗಿಯ ಪಿಎಸ್ಐ!
ಆಕಾಶ ಕಟ್ಟಿಮನಿ, ಯಲ್ಲಪ್ಪ ಕಟ್ಟಿಮನಿ, ಸುರೇಶ್ ಕಟ್ಟಿಮನಿ, ಬಸವರಾಜ ಕಟ್ಟಿಮನಿ, ಕಾರ್ತಿಕ್ ಕಟ್ಟಿಮನಿ, ದರ್ಶನ ಹರಿಜನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತೀವ್ರ ವಿಚಾರಣೆ ನಡೆಸಿದ್ದಾರೆ. ಪಟ್ಟಣದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಭು ಸೂರಿನ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.