ಹುಬ್ಬಳ್ಳಿ: ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಒದಗಿಸಿಕೊಡುವಂತೆ ಆಗ್ರಹಿಸಿ ರಾತ್ರಿಯಿಡೀ ಬಸ್ ಮುಂದೆ ಕುಳಿತು ವಿದ್ಯಾರ್ಥಿಗಳು, ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ನಡೆದಿದೆ.
ಅಗಡಿ ಗ್ರಾಮದಿಂದ ಹೈಸ್ಕೂಲ್ ವಿದ್ಯಾಭ್ಯಾಸಕ್ಕೆ 5 ಕಿ. ಮೀ ದೂರದಲ್ಲಿನ ಅರಳಿಕಟ್ಟಿ ಗ್ರಾಮಕ್ಕೆ ವಿದ್ಯಾರ್ಥಿಗಳು ತೆರಳುತ್ತಾರೆ. ಸಂಜೆ 5 ಗಂಟೆಗೆ ಶಾಲೆ ಬಿಟ್ಟರೆ, ಬಸ್ ಇಲ್ಲದ ಕಾರಣ ರಾತ್ರಿ 10 ಗಂಟೆಗೆ ವಿದ್ಯಾರ್ಥಿಗಳು ಮನೆ ಸೇರುವ ದುಸ್ಥಿತಿ ಎದುರಾಗಿದೆ. ಇದರಿಂದ ಬೇಸತ್ತ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಅಹೋರಾತ್ರಿ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆ ಇತ್ಯರ್ಥ ಆಗುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು.
ಇದನ್ನೂ ಓದಿ: ದುರ್ಗದಲ್ಲಿ ರೈಲ್ವೆ ಕೆಳ ಸೇತುವೆ ತೆರೆಯುವಂತೆ ನಿವಾಸಿಗಳ ಪ್ರತಿಭಟನೆ : ಪೊಲೀಸರಿಂದ ಲಾಠಿ ಚಾರ್ಜ್