ETV Bharat / state

ಹಂತ ಹಂತವಾಗಿ ಕಾಲೇಜುಗಳಿಗೆ ವಿದ್ಯಾರ್ಥಿಗಳು ಆಗಮಿಸುತ್ತಾರೆ' ಶೆಟ್ಟರ್ ವಿಶ್ವಾಸ - Hubli Jagadish Shettar News

ಈಗ ಸಂಪತ್‌ರಾಜ್ ಬಂಧನವಾಗಿದ್ದು ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಘಟನೆಗೆ ಕಾರಣರಾದವರಿಗೆ ಕಾನೂನು ವ್ಯಾಪ್ತಿಯಲ್ಲಿ ಕ್ರಮವಾಗುತ್ತೆ..

Shatter
ಶೆಟ್ಟರ್
author img

By

Published : Nov 17, 2020, 12:37 PM IST

ಹುಬ್ಬಳ್ಳಿ : ಕಾಲೇಜುಗಳು ಇಂದಷ್ಟೇ ಪ್ರಾರಂಭವಾಗಿರುವುದರಿಂದ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ. ಹಂತ ಹಂತವಾಗಿ ಕಾಲೇಜಿಗೆ ಬರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿರುವ ಹಿನ್ನೆಲೆ, ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕಾಲೇಜುಗಳ ಆರಂಭಿಸಲಾಗಿದೆ. ಹಂತ ಹಂತವಾಗಿ ವಿದ್ಯಾರ್ಥಿಗಳು ಕಾಲೇಜುಗಳಿಗೆ ಆಗಮಿಸುತ್ತಾರೆ ಎಂದರು.

ಸಚಿವ ಜಗದೀಶ್ ಶೆಟ್ಟರ್ ಮಾಧ್ಯಮಗಳೊಂದಿಗೆ ಮಾತನಾಡಿದರು.

ಕೆ.ಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಗಲಭೆ ಪ್ರಕರಣದ ತನಿಖೆ ನಡೆಯುತ್ತಿದೆ. ಮಾಜಿ ಮೇಯರ್ ಸಂಪತ್ ‌ರಾಜ್ ತಲೆಮರೆಸಿಕೊಂಡಿದ್ದು, ಬಂಧನದ ಅನಿವಾರ್ಯತೆಯಿತ್ತು.

ಈಗ ಸಂಪತ್‌ರಾಜ್ ಬಂಧನವಾಗಿದ್ದು ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಘಟನೆಗೆ ಕಾರಣರಾದವರಿಗೆ ಕಾನೂನು ವ್ಯಾಪ್ತಿಯಲ್ಲಿ ಕ್ರಮವಾಗುತ್ತೆ ಎಂದರು.

ಸಚಿವ ಸಂಪುಟ ವಿಸ್ತರಣೆ ಪುನಾರಚನೆ ಸಿಎಂ‌ ವಿವೇಚನೆಗೆ ಬಿಟ್ಟದ್ದು, ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಮುಖ್ಯಮಂತ್ರಿಗಳು ಸಂಪುಟ ವಿಸ್ತರಣೆ ಮಾಡುತ್ತಾರೆ. ನಮ್ಮ ಸರ್ಕಾರ ಬಂದ ನಂತರ ಇದುವರೆಗೂ ಎಲ್ಲ ಸುಲಲಿತವಾಗಿ ನಡೆದಿದೆ.

ಉಪ ಚುನಾವಣೆ ಗೆದ್ದಿದ್ದೇವೆ, ಸಂಪುಟ ರಚನೆಯೂ ಸುಗಮವಾಗಿ ಆಗಲಿದೆ. ಯಾರಿಗೆ ಏನು ಜವಾಬ್ದಾರಿ ಕೊಡಬೇಕೆಂದು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.