ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಭಿಕ್ಷಾಟನೆ ಮಾಡುವ ಮೂಲಕ ವಿವಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಸ್ತೆ, ಕುಡಿಯುವ ನೀರು, ವಸತಿ ಸೇರಿದಂತೆ ಅನೇಕ ಸಮಸ್ಯೆಗಳು ಕಾಡುತ್ತಿವೆ ಎಂದು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ವಿಶ್ವ ವಿದ್ಯಾಲಯದ ಹಾಸ್ಟೆಲ್ ಹಾಗೂ ರಸ್ತೆ ಸಮಸ್ಯೆ ಸುಧಾರಣೆಗೆ ಮಾಡಬೇಕು ಎಂದು ಭಿಕ್ಷಾಟನೆ ಮಾಡುವ ಮೂಲಕ ಕವಿವಿಗೆ ಅನುದಾನ ನೀಡಲು ಮುಂದಾಗಿದ್ದಾರೆ. ಈ ಮೂಲಕ ವಿಶ್ವ ವಿದ್ಯಾಲಯದಲ್ಲಿ ಅನುದಾನ ಇಲ್ಲವೇ ಎಂದು ವಿದ್ಯಾರ್ಥಿಗಳು ಪ್ರಶ್ನಿಸುತ್ತಿದ್ದಾರೆ.