ETV Bharat / state

ಹುಬ್ಬಳ್ಳಿ ಕಿಮ್ಸ್​ನಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿ ಗರ್ಭಪಾತ..!

ಕೊರೊನಾ ವೈರಸ್ ದೃಢಪಟ್ಟಿದ್ದರಿಂದ ಗರ್ಭಿಣಿಯೊಬ್ಬಳಿಗೆ ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಗರ್ಭಪಾತ ಮಾಡಲಾಗಿದೆ. ಮಹಿಳೆಯ ಆರೋಗ್ಯ ಸ್ಥಿರವಾಗಿದ್ದು, ಗರ್ಭಿಣಿಯ ಜೀವ ರಕ್ಷಣೆಗಾಗಿ ಇದು ಅನಿವಾರ್ಯವಾಗಿತ್ತು ಎನ್ನಲಾಗುತ್ತಿದೆ.

author img

By

Published : May 8, 2020, 4:15 PM IST

Successful abortion of pregnant woman with Corona infection at Hubballi Kims Hospital
ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆ

ಹುಬ್ಬಳ್ಳಿ: ಬಾಗಲಕೋಟೆ ಮೂಲದ ಗರ್ಭಿಣಿಯೋರ್ವಳಿಗೆ ಕೊರೊನಾ ವೈರಸ್ ದೃಢಪಟ್ಟಿದ್ದರಿಂದ ಗರ್ಭಿಣಿಯ ಜೀವ ರಕ್ಷಣೆಗಾಗಿ ಗರ್ಭಪಾತ ಮಾಡುವುದು ಅನಿವಾರ್ಯವಾಗಿತ್ತು. ಹಾಗಾಗಿ ಇಂದು ಇಲ್ಲಿನ ಕಿಮ್ಸ್​ ಆಸ್ಪತ್ರೆಯ ವೈದ್ಯರು, ಗರ್ಭಿಣಿಯ ಸಂಬಂಧಿಕರ ಒಪ್ಪಿಗೆ ಹಾಗೂ ತಜ್ಞರ ಸಲಹೆ ಮೇರೆಗೆ ಯಶಸ್ವಿಯಾಗಿ ಗರ್ಭಪಾತ ಮಾಡಿಸಿದ್ದಾರೆ‌.

ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಕೊರೊನಾ ಸೋಂಕಿತ ಗರ್ಭಿಣಿಗೆ ಶುಕ್ರವಾರ ಬೆಳಗ್ಗೆ 11-40ಕ್ಕೆ ಗರ್ಭಪಾತ ಮಾಡಲಾಗಿದೆ. ಮಹಿಳೆಯ ಆರೋಗ್ಯ ಸ್ಥಿರವಾಗಿದೆ. ಢಾಣಕಶಿರೂರ ಮೂಲದ 23 ವರ್ಷದ ಈ ಮಹಿಳೆ ಕೊರೊನಾ ಕಾರಣದಿಂದ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದಳು. ಅಲ್ಲದೇ, ದೇಹದಲ್ಲಿ ಸೋಡಿಯಂ ಅಂಶ ಕಡಿಮೆಯಾಗಿ ಸುಸ್ತಾಗಿದ್ದಳು.

ಅಲ್ಸರ್ ಆಗಿದ್ದರಿಂದ ಊಟ ಸಹ ಮಾಡಲು ಆಗುತ್ತಿರಲಿಲ್ಲ. ಹಿಮೋಗ್ಲೋಬಿನ್ ಕಡಿಮೆಯಾಗಿದ್ದರಿಂದ ರಕ್ತ ನೀಡಲಾಗಿತ್ತು. ಹೀಗಾಗಿ ಮಹಿಳೆಯನ್ನು ಉಳಿಸಿಕೊಳ್ಳಲು ಗರ್ಭಪಾತ ಅನಿವಾರ್ಯವಾಗಿತ್ತು. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿ ಮಹಿಳೆ ಕುಟುಂಬಕ್ಕೆ ಅಗತ್ಯತೆ ಮನವರಿಕೆ ಮಾಡಿಕೊಟ್ಟಿದ್ದೆವು. ಮಾತ್ರೆಗಳನ್ನು ನೀಡುವ ಮೂಲಕ ಗರ್ಭಪಾತ ಮಾಡಲಾಗಿದೆ. ಮಹಿಳೆಯ ಆರೋಗ್ಯ ಸ್ಥಿರವಾಗಿದೆ ಎಂದು ಕಿಮ್ಸ್​ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.