ಧಾರವಾಡ: ಕೊರೊನಾ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಗೆ ನೀಡಿರುವ ಕ್ರಮ ವಿರೋಧಿಸಿ ಎಸ್ಯುಸಿಐ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಎದುರು ಜಮಾಯಿಸಿದ ಎಸ್ಯುಸಿಐ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೊರೊನಾ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೊರೊನಾ ಸಮಯದಲ್ಲಿ ಘೋಷಿಸಿದ 20 ಲಕ್ಷ ಕೋಟಿ ಪ್ಯಾಕೇಜ್ ಎಲ್ಲಿ ಹೋಯ್ತು ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು, ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.