ಹುಬ್ಬಳ್ಳಿ : ಕೆಎಲ್ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ ಹಾಜರುಪಡಿಸುವಾಗ ಮೂವರು ಆರೋಪಿ ವಿದ್ಯಾರ್ಥಿಗಳ ಮೇಲೆ ನ್ಯಾಯಾಲಯದ ಆವರಣದಲ್ಲಿ ಹಲ್ಲೆ ಮಾಡಿದ್ದವರ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಾಗಿದೆ.
ಕೋರ್ಟ್ ಆವರಣದಲ್ಲಿ ಆರೋಪಿಗಳ ಮೇಲೆ ಚಪ್ಪಲಿ ಎಸೆತ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ವಿದ್ಯಾನಗರ ಪೊಲೀಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವಾಗ ಹಲ್ಲೆ ನಡೆದಿತ್ತು. ಪೊಲೀಸ್ ವಾಹನ ತಡೆದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿದ್ದರು.
ಹೀಗಾಗಿ ವಿದ್ಯಾನಗರ ಠಾಣೆಯಲ್ಲಿ ಸುಮಾರು 10-15 ಅಪರಿಚಿತರ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.