ಹುಬ್ಬಳ್ಳಿ : ಅನಧಿಕೃತ ಪ್ರಾರ್ಥನಾ ಮಂದಿರ ತೆರವುಗೊಳಿಸಲು ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಅವಳಿನಗರದ ಭಕ್ತರಲ್ಲಿ ಆತಂಕ ಶುರುವಾಗಿದೆ.
ಧಾರವಾಡ ಜಿಲ್ಲೆಯಲ್ಲಿ 324 ಮಂದಿರ, ಮಸೀದಿ ತೆರವುಗೊಳಿಸಲು ಆದೇಶ ನೀಡಲಾಗಿದೆ. ಈಗಾಗಲೇ 43 ಧಾರ್ಮಿಕ ಕಟ್ಟಡಗಳನ್ನು ಜಿಲ್ಲಾಡಳಿತ ತೆರವುಗೊಳಿಸಿದೆ. ಇನ್ನೂ 281 ಅನಧಿಕೃತವಾಗಿರುವ ಧಾರ್ಮಿಕ ಕಟ್ಟಡ ತೆರವುಗೊಳಿಸುವುದೇ ಸವಾಲಾಗಿದೆ.
ಹುಬ್ಬಳ್ಳಿಯ ಉಣಕಲ್ ಕ್ರಾಸ್ ಬಳಿ ಇರುವ ಶ್ರೀ ರಾಮಲಿಂಗೇಶ್ವರ ದೇವಾಲಯದ ಭಕ್ತರಲ್ಲಿ ಆತಂಕ ಎದುರಾಗಿದೆ. ಪುರಾತನ ಕಾಲದ ಶಂಭುಲಿಂಗ ಗುಡಿಯನ್ನು ಬಿಆರ್ಟಿಎಸ್ ಮೇಲ್ಸೇತುವೆ ಕಾಮಗಾರಿ ಸಮಯದಲ್ಲಿಯೂ ತೆರವುಗೊಳ್ಳದ ಗುಡಿ, ಈಗ ಸುಪ್ರೀಂಕೋರ್ಟ್ ಆದೇಶದಿಂದ ತೆರವುಗೊಳ್ಳಲಿದೆಯಾ ಎಂಬ ಆತಂಕ ಜನರಲ್ಲಿದೆ.
ಇದನ್ನೂ ಓದಿ:ದೇಗುಲ ಕೆಡವಿದ ವಿಚಾರ.. ವಿವಿಧ ಪಕ್ಷಗಳ ನಾಯಕರ ಪ್ರತಿಕ್ರಿಯೆ ಹೀಗಿವೆ..
ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ದೇವಸ್ಥಾನ ತೆರವಿನ ಬಗ್ಗೆ ಆಡಳಿತ ಮಂಡಳಿಯಿಂದ ಚರ್ಚೆ ನಡೆಸಲಾಗುತ್ತದೆ ಎಂದು ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.