ಹುಬ್ಬಳ್ಳಿ : ನೈಋತ್ಯ ರೈಲ್ವೆ ಬಹು ನಿರೀಕ್ಷಿತ ಹಾಗೂ ಮಹತ್ವ ಪೂರ್ಣ ಕಾರ್ಯಗಳಲ್ಲಿ ಒಂದಾಗಿರುವ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ನೆರವೇರಿಸಿದರು.
ಓದಿ: ನಮ್ಮ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರದಿದ್ದರೆ ಅಪಾಯ ತಪ್ಪಿದ್ದಲ್ಲ : ಸಚಿವ ಡಾ. ಸುಧಾಕರ್
ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮೂವತ್ತಕ್ಕೂ ಹೆಚ್ಚು ಸಂತರು, ನೂರಕ್ಕೂ ಹೆಚ್ಚು ಯುವ ಸಮೂಹ ಹಾಗೂ ನೈಋತ್ಯ ರೈಲ್ವೆ ವ್ಯವಸ್ಥಾಪಕ ನಿರ್ದೇಶಕ ಅಜಯಕುಮಾರ್ ಸಿಂಗ್ ಸೇರಿ ರೈಲ್ವೆ ಅಧಿಕಾರಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
ನೈಋತ್ಯ ರೈಲ್ವೆ ವಲಯದಲ್ಲಿ ಸಾಕಷ್ಟು ಜನಪರ ಯೋಜನೆ ಜಾರಿಗೊಳಿಸುವ ಮೂಲಕ ಜನರಿಗೆ ಉತ್ತಮ ಸೇವೆಯನ್ನು ನೈಋತ್ಯ ರೈಲ್ವೆ ವಲಯ ನೀಡುತ್ತಿದೆ ಎಂದು ಸಚಿವರು ವ್ಯವಸ್ಥಾಪಕರ ಹಾಗೂ ಸಿಬ್ಬಂದಿ ಕಾರ್ಯ ಶ್ಲಾಘಿಸಿದರು.
ವಿವೇಕಾನಂದರ ಸಂದೇಶ ಪರಿಚಯಿಸುವ ಕಾರ್ಯ ನಿಜಕ್ಕೂ ವಿಶೇಷ : ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿ ಮಾಧ್ಯಮದ ಜೊತೆಗೆ ಮಾತನಾಡಿದ ಯುವ ಬ್ರಿಗೇಡ್‌ನ ಚಕ್ರವರ್ತಿ ಸೂಲಿಬೆಲೆ, ಸ್ವಾಮಿ ವಿವೇಕಾನಂದರು ಕರ್ನಾಟಕದ ನೆಲದಲ್ಲಿ ಸಾಕಷ್ಟು ಓಡಾಡಿದ್ದಾರೆ. ಅಲ್ಲದೇ ಮಹಿಳಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವತ್ತ ಸ್ವಾಮಿ ವಿವೇಕಾನಂದರು ಸಾಕಷ್ಟು ಪ್ರಭಾವ ಬೀರಿದ್ದಾರೆ ಎಂದರು.