ETV Bharat / state

ತಾರಿಹಾಳ ಸ್ಪಾರ್ಕರ್ ಕಾರ್ಖಾನೆ ಬೆಂಕಿ ಅವಘಡ: ಮೃತರ ಸಂಖ್ಯೆ 6ಕ್ಕೆ ಏರಿಕೆ - ಹುಬ್ಬಳ್ಳಿ

ತಾರಿಹಾಳ ಇಂಡಸ್ಟ್ರಿಯಲ್ ಏರಿಯಾದ ಮೊದಲ ಕ್ರಾಸ್​​ನಲ್ಲಿರುವ ಸ್ಪಾರ್ಕರ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೃತರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.

Tarihala sparker factory fire accident
ತಾರಿಹಾಳ ಸ್ಪಾರ್ಕರ್ ಕಾರ್ಖಾನೆ ಬೆಂಕಿ ಅವಘಡ
author img

By

Published : Aug 8, 2022, 3:50 PM IST

ಹುಬ್ಬಳ್ಳಿ: ತಾರಿಹಾಳ ಕಾರ್ಖಾನೆ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ತಾರಿಹಾಳ ಕೈಗಾರಿಕಾ ವಸಾಹತು ಪ್ರದೇಶದ ಐಸಿ ಲೇಮ್ ಸ್ಪಾರ್ಕಲ್ ಕ್ಯಾಂಡಲ್ ಉತ್ಪಾದನಾ ಕಾರ್ಖಾನೆಯಲ್ಲಿ, ಜು. 23 ರಂದು ಈ ದುರಂತ ಸಂಭವಿಸಿತ್ತು. ಈ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತೋರ್ವ ಮಹಿಳೆ ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ. ತಾರಿಹಾಳ ಗ್ರಾಮದ ಚನ್ನವ್ವ ಮಂಜುನಾಥ ಅರಿವಾಳ (42) ಮೃತರು.

ಬ್ಲಾಸ್ಟ್​ನಲ್ಲಿ ಎಂಟು ಜನ ಕಾರ್ಮಿಕರು ಗಾಯಗೊಂಡಿದ್ದರು. ಎಂಟು ಜನರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಆರು ಜನ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದು, ಇನ್ನಿಬ್ಬರಿಗೆ ಕಿಮ್ಸ್​ನಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಮಾಲೀಕ ಅಬ್ದುಲ್ ಖಾದಿರ್ ಶೇಖ್ ಮತ್ತು ವ್ಯವಸ್ಥಾಪಕ ಮಂಜುನಾಥನನ್ನು ಬಂಧಿಸಿದ್ದಾರೆ. ‌ಇನ್ನೂ ಇಬ್ಬರು ಪಾಲುದಾರರು ತಲೆಮರೆಸಿಕೊಂಡಿದ್ದು, ಗ್ರಾಮೀಣ ಠಾಣೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಸ್ಪಾರ್ಕರ್ ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ: ನಾಲ್ವರು ಕಾರ್ಮಿಕರ ಸಾವಿನ ಶಂಕೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.