ಧಾರವಾಡ: ಕೋವಿಡ್-19 ಪ್ರಯೋಗಾಲಯಕ್ಕೆ ಉಪಕರಣ ನೀಡಲು ಪ್ರತಿಕ್ರಿಯಿಸದ ಹಿನ್ನೆಲೆ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸೂಕ್ಷ್ಮಾಣು ಜೀವಶಾಸ್ತ್ರ ಹಾಗೂ ಅಪರಾಧಶಾಸ್ತ್ರ ವಿಭಾಗಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪವಿಭಾಗಾಧಿಕಾರಿ ಮಹಮದ್ ಜುಬೇರ್ ಹಾಗೂ ತಹಶೀಲ್ದಾರ್ ಸಂತೋಷ ಬಿರಾದಾರ ನೇತೃತ್ವದಲ್ಲಿ ದಾಳಿ ಮಾಡಿ ಉಪಕರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕಿಮ್ಸ್ನ ಕೋವಿಡ್ ಪ್ರಯೋಗಾಲಯಕ್ಕೆ ಅಗತ್ಯವಾಗಿರುವ ಉಪಕರಣಗಳನ್ನು ಪೂರೈಸದ ಕಾರಣ RTPCR, ಐಸ್ ಪ್ಯಾಕಿಂಗ್ ಯಂತ್ರಗಳು ಹಾಗೂ ಬಿಎಸ್ಎಲ್ಎ 2 ಕ್ಯಾಬಿನೆಟ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.