ETV Bharat / state

ಹುಬ್ಬಳ್ಳಿ: ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ನೀರುಪಾಲಾಗಿದ್ದ ಯುವಕನ‌ ಶವ ಪತ್ತೆ - a young man who had come on a trip to Neersagara reservoir was drowned in Hubli

ಸೆಲ್ಫಿ ತೆಗೆಯಲು ಹೋಗಿ ನಿನ್ನೆ ಹುಬ್ಬಳ್ಳಿಯ ನೀರಸಾಗರ ಜಲಾಶಯದಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಪತ್ತೆಯಾಗಿದೆ.

the-body-of-a-young-man-was-found-who-was-drowned-in-hubli
ಸೆಲ್ಫಿ ತೆಗೆದುಕೊಳ್ಳಲು ಹೋಗಿ ನೀರುಪಾಲಾಗಿದ್ದ ಯುವಕನ‌ ಶವ ಪತ್ತೆ
author img

By

Published : Jul 18, 2022, 4:20 PM IST

ಹುಬ್ಬಳ್ಳಿ : ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋಗಿ ಭಾನುವಾರ ನೀರುಪಾಲಾಗಿದ್ದ ಯುವಕನ ಮೃತದೇಹ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ಕಿರಣ ರಜಪೂತ(22) ಎಂದು ಗುರುತಿಸಲಾಗಿದೆ.

ನಿನ್ನೆ ಕಲಘಟಗಿ ತಾಲೂಕಿನ ನೀರಸಾಗರ ಜಲಾಶಯಕ್ಕೆ ಕಿರಣ ರಜಪೂತ ಮತ್ತು ಆತನ ಗೆಳೆಯರು ಪ್ರವಾಸಕ್ಕೆಂದು ಬಂದಿದ್ದರು. ಈ ಸಂದರ್ಭದಲ್ಲಿ ಜಲಾಶಯದ ದಡದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾಗ ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಕೊಚ್ಚಿ ಹೋದ ಯುವಕನ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ನಿನ್ನೆ ಕಾರ್ಯಾಚರಣೆ ನಡೆಸಿದ್ದರು.‌ ಆದರೆ ನಿನ್ನೆ ಯುವಕನ‌ ಮೃತದೇಹ ಪತ್ತೆಯಾಗಿರಲಿಲ್ಲ.

ಇಂದು ಬೆಳಗ್ಗೆ ಮತ್ತೆ ಕಾರ್ಯಾಚರಣೆ ಮುಂದುವರೆಸಿದಾಗ ಯುವಕ ಕಿರಣ ಶವ ಪತ್ತೆಯಾಗಿದೆ. ಈ ಬಗ್ಗೆ ಕಲಘಟಗಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ : ಕೊಡಗು: ಜಲಾವೃತವಾದ ರಸ್ತೆ ಮಧ್ಯೆ ಸಿಲುಕಿದ ಜೀಪ್​ ರಕ್ಷಣೆ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.