ಧಾರವಾಡ: ಸಚಿವ ಸಂಪುಟ ವಿಸ್ತರಣೆ ಸಿಎಂ ಅವರ ವಿವೇಚನೆಗೆ ಬಿಟ್ಟದ್ದು, ಅವರ ಆಡಳಿತಕ್ಕೆ ರಾಜ್ಯದ ಜನತೆ ಉತ್ತಮ ಆಡಳಿತ ನೀಡುತ್ತಿದೆ ಎಂಬ ಸರ್ಟಿಫಿಕೇಟ್ ಕೊಟ್ಟಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಧಾರವಾಡದ ಕೃಷಿ ವಿವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊವಿಡ್ ಹಾಗೂ ನೆರೆ ಸಂದರ್ಭದಲ್ಲಿ ಸರ್ಕಾರ ಉತ್ತಮ ಕೆಲಸ ಮಾಡಿದೆ. ಈ ಹಿನ್ನಲೆ ಮತದಾರರು ಕೈಹಿಡಿದಿದ್ದಾರೆ ಎಂದರು.
ಮುನಿರತ್ನಗೆ ಸಚಿವ ಸ್ಥಾನ ನೀಡಬೇಕಾ ಎಂಬ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಮಾತು ಕೊಟ್ಟಂತೆ ನಡೆದಿದ್ದಾರೆ. ಮುನಿರತ್ನಗೂ ಸಚಿವ ಸ್ಥಾನ ನೀಡಬೇಕು ಎಂದರು.