ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿರುವ ನಿಜವಾದ ಆರೋಪಿಗಳನ್ನು ಬಂಧಿಸಿ, ಅಮಾಯಕರನ್ನು ಬಿಡುಗಡೆಗೊಳಿಸಿ ಕೇಸ್ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ತಹಶೀಲ್ದಾರ್ ಕಚೇರಿ ಎದುರು ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳ ಸಂಭ್ರಮದ ವೇಳೆ ನಮ್ಮ ಕಾರ್ಯಕರ್ತರು ಪಕ್ಷದ ಪರ ಘೋಷಣೆ ಹಾಕಿದ್ದಾರೆ. ಪಾಕಿಸ್ತಾನದ ಪರ ಅಲ್ಲ.
ಓದಿ:ಸಂಘ ಪರಿವಾರದವರೇ ಪಾಕ್ ಪರ ಘೋಷಣೆ ಕೂಗಿದ ಆರೋಪ .. ಕ್ರಮಕ್ಕೆ ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ
ಆದ್ರೆ ಪೊಲೀಸರು ಮೂವರು ಅಮಾಯಕರನ್ನು ಬಂಧಿಸಿ, ದೇಶದ್ರೋಹದ ಕೇಸ್ ಹಾಕಿದ್ದಾರೆ. ಹಾಗಾಗಿ ನಿರಪರಾಧಿಗಳನ್ನು ಬಿಡುಗಡೆ ಮಾಡಿ, ಅವರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.