ಹುಬ್ಬಳ್ಳಿ: ಗಂಗಿವಾಳ ಗ್ರಾ.ಪಂ ಸದಸ್ಯ ದೀಪಕ್ ಪಟದಾರಿ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದೆ. ಈ ಹಿನ್ನೆಲೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಗೊಳಿಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಆಗಮಿಸಿರುವ ಅಧಿಕಾರಿಗಳು, ಮಾಹಿತಿ ಸಂಗ್ರಹ ಹಾಗೂ ಕೊಲೆಯ ತನಿಖೆ ನಡೆಸುತ್ತಿದ್ದಾರೆ.
ಕಳೆದ ಜುಲೈ 4ರಂದು ಗ್ರಾ.ಪಂ ಸದಸ್ಯ ದೀಪಕ್ ಪಟದಾರಿಯನ್ನು ,ಹುಬ್ಬಳ್ಳಿಯ ರಾಯನಾಳ ಬಳಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಪೊಲೀಸರ ಮೇಲೆ ಅನುಮಾನ ವ್ಯಕ್ತವಾಗಿತ್ತು. ಅಲ್ಲದೇ ಇದನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಈ ನಿಟ್ಟಿನಲ್ಲಿ ತನಿಖೆಯನ್ನು ಸಿಐಡಿಗೆ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಒಟ್ಟು ಆರು ಜನರ ತಂಡ ಕೊಲೆ ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದೆ. ಇಬ್ಬರು DYSP ಅಧಿಕಾರಿಗಳ ನೇತೃತ್ವದಲ್ಲಿ ಮಾಹಿತಿ ಸಂಗ್ರಹ ಕಾರ್ಯ ಮುಂದುವರೆದಿದೆ.
ಇದನ್ನೂ ಓದಿ: ದೀಪಕ ಪಟದಾರಿ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ