ETV Bharat / state

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಅತಿಕ್ರಮಣ ಜಾಗ ತೆರವುಗೊಳಿಸುವಂತೆ ಡಿಸಿ ಸೂಚನೆ - ಅತಿಕ್ರಮಣ ಜಾಗವನ್ನ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಸೂಚನೆ

ನ್ಯಾಯಾಲಯದ ಆದೇಶವನ್ನು ಪಾಲಿಸುವ ಮೂಲಕ ಅನಧಿಕೃತವಾಗಿ ಮತ್ತು ಅತಿಕ್ರಮಣ ಮಾಡಿರುವ ಕಟ್ಟಡ ಹಾಗೂ ಇತರ ನಿರ್ಮಾಣಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಲಾಗುತ್ತಿದೆ. ಒತ್ತುವರಿದಾರರು ತಾವೇ ಖುದ್ದಾಗಿ ಕಾರ್ಯಾಚರಣೆ ಪೂರ್ವದಲ್ಲಿ ತೆರವುಗೊಳಿಸಬೇಕು.

The District Collector instructed to clear the encroached space
ಅತಿಕ್ರಮಣ ಜಾಗವನ್ನ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಸೂಚನೆ
author img

By

Published : Mar 26, 2021, 7:16 AM IST

ಧಾರವಾಡ: ಸರ್ವೋಚ್ಚ ನ್ಯಾಯಾಲಯ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯವು ನೀಡಿರುವ ಆದೇಶದಂತೆ ಜಿಲ್ಲೆಯಲ್ಲಿ ವಿವಿಧ ಪ್ರಕಾರದ ರಸ್ತೆ, ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡಿ, ಅತಿಕ್ರಮಣ ಮಾಡಿ ನಿರ್ಮಿಸಿರುವ ದೇವಸ್ಥಾನ, ಮಸೀದಿ ಸೇರಿದಂತೆ ವಿವಿಧ ಧಾರ್ಮಿಕ ಕಟ್ಟಡಗಳು ಸೇರಿದಂತೆ ಎಲ್ಲಾ ರೀತಿಯ ಕಟ್ಟಡ, ಇತರೆ ನಿರ್ಮಾಣಗಳನ್ನು ತೆರವುಗೊಳಿಸಲು ಕಾರ್ಯಾಚರಣೆ ಆರಂಭಿಸಲಾಗಿದ್ದು, ಒತ್ತುವರಿದಾರರು ಸ್ವಯಂ ಪ್ರೇರಣೆಯಿಂದ ಒತ್ತುವರಿ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಅತಿಕ್ರಮಣ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಈಗಾಗಲೇ ತಹಶೀಲ್ದಾರ್, ಪಟ್ಟಣ ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಸಭೆ ಜರುಗಿಸಿ ನಿರ್ದೇಶನ ನೀಡಲಾಗಿದೆ. ಶೀಘ್ರದಲ್ಲಿ ಧಾರವಾಡ ನಗರದ ಮುಖ್ಯ ಮಾರುಕಟ್ಟೆ ಹಾಗೂ ಇತರ ಪ್ರದೇಶಗಳಲ್ಲಿನ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ನ್ಯಾಯಾಲಯದ ಆದೇಶವನ್ನು ಪಾಲಿಸುವ ಮೂಲಕ ಅನಧಿಕೃತವಾಗಿ ಮತ್ತು ಅತಿಕ್ರಮಣ ಮಾಡಿರುವ ಕಟ್ಟಡ ಹಾಗೂ ಇತರ ನಿರ್ಮಾಣಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಲಾಗುತ್ತಿದೆ. ಒತ್ತುವರಿದಾರರು ತಾವೇ ಖುದ್ದಾಗಿ ಕಾರ್ಯಾಚರಣೆ ಪೂರ್ವದಲ್ಲಿ ತೆರವುಗೊಳಿಸಬೇಕು.

ಓದಿ : ಚಿಕ್ಕಬಳ್ಳಾಪುರಕ್ಕೆ ಬಂದ 'ದಿ ಗ್ರೇಟ್​ ಖಲಿ'... ನೆಚ್ಚಿನ ಕುಸ್ತಿಪಟು ನೋಡಲು ಅಭಿಮಾನಿಗಳ ನೂಕುನುಗ್ಗಲು!

ಹುಬ್ಬಳ್ಳಿ ನಗರ, ಕುಂದಗೋಳ, ಅಣ್ಣೀಗೇರಿ ಪಟ್ಟಣಗಳಲ್ಲಿ ಈಗಾಗಲೇ ಕೆಲವು ದಿನಗಳಿಂದ ತೆರವು ಕಾರ್ಯಾಚರಣೆ ನಡೆದಿದ್ದು, ಉಳಿದಂತೆ ಜಿಲ್ಲೆಯ ಇತರ ನಗರ, ಪಟ್ಟಣ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ಹಂತಹಂತವಾಗಿ ಆರಂಭಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಒತ್ತುವರಿ ತೆರವುಗೊಳಿಸಲು ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ ಮೂಲಕ ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ತಿಳಿಸಲಾಗಿದೆ. ಆದ್ದರಿಂದ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಸರ್ಕಾರಿ ಜಮೀನು ಒತ್ತುವರಿ ಹಾಗೂ ಅತಿಕ್ರಮಣ ಮಾಡಿರುವವರು ಈಗಲೇ ಸ್ವಯಂ ಪ್ರೇರಣೆಯಿಂದ ತೆರವುಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.