ETV Bharat / state

ಕಾನೂನು ಎಲ್ಲರಿಗೂ ಒಂದೇ, ಇದರಲ್ಲಿ ರಾಜಕೀಯ ಬೇಡ: ಬಸವರಾಜ್ ಹೊರಟ್ಟಿ

author img

By

Published : Nov 5, 2020, 4:01 PM IST

ಯೋಗೇಶ್​ ಗೌಡ ಹತ್ಯೆಗೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ತಂಡ ವಿಚಾರಣೆ ಮಾಡುತ್ತಿದೆ. ಕಾನೂನು ಎಲ್ಲರಿಗೂ ಒಂದೇ. ಇದರಲ್ಲಿ ರಾಜಕೀಯ ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು.

Basavaraj Horatti
ಬಸವರಾಜ್ ಹೊರಟ್ಟಿ

ಹುಬ್ಬಳ್ಳಿ: ಈ ಹಿಂದೆ ಬಿಜೆಪಿಯವರು ಸಿಬಿಐಯನ್ನು ಕಾಂಗ್ರೆಸ್ ಕೈಗೊಂಬೆ ಅಂತಿದ್ರು. ಈಗ ಕಾಂಗ್ರೆಸ್​ನವರು ಸಿಬಿಐ ಬಿಜೆಪಿ ಕೈಗೊಂಬೆ ಅಂತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದರು.

ನಗರದಲ್ಲಿಂದು ಮಾತನಾಡಿದ ಅವರು, ಯೋಗೇಶ್​ ಗೌಡ ಹತ್ಯೆಗೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ತಂಡ ವಿಚಾರಣೆ ಮಾಡುತ್ತಿದೆ. ಕಾನೂನು ಎಲ್ಲರಿಗೂ ಒಂದೇ. ಇದರಲ್ಲಿ ರಾಜಕೀಯ ಮಾಡಬಾರದು ಎಂದರು.

ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ

ಸಿಬಿಐ ಆಗಲಿ, ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಳ್ಳಬಾರದು. ಕಾನೂನು ಎಲ್ಲರಿಗೂ ಒಂದೇ. ಇಂತಹ ಸಂಸ್ಥೆಗಳನ್ನ ಅಧಿಕಾರಕ್ಕೆ ಬಂದ ಪಕ್ಷಗಳು ದುರುಪಯೋಗ ಮಾಡಿಕೊಳ್ಳಬಾರದು ಎಂದರು.

ವಿನಯ್ ಕುಲಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ಮಾತನಾಡಿ, ಅವರು ಬಿಜೆಪಿ ಸೇರುವುದಿಲ್ಲ. ಇದೇ ಕಾರಣಕ್ಕೆ ಇವತ್ತು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಸಾರ್ವಜನಿಕರು ಚರ್ಚೆ ಮಾಡುವಂತಾಗಿದೆ. ಬಿಜೆಪಿ ಹೈಕಮಾಂಡ್ ಭೇಟಿಗೆ ವಿನಯ್ ಕುಲಕರ್ಣಿ ಹೋಗಿದ್ದು ನಿಜ. ಆದ್ರೆ ಯಾರು ಯಾರನ್ನ ಕರೆದಿದ್ದರು ಎನ್ನುವುದು ಗೊತ್ತಿಲ್ಲ. ಇದು‌ ರಾಜಕೀಯ ಒತ್ತಡದಿಂದ ಆಗಿರಬಹುದು ಎಂದು ಅಭಿಪ್ರಾಯಪಟ್ಟರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.