ETV Bharat / state

ಪಾಕ್ ಪರ ಘೋಷಣೆ: ಆರೋಪಿಗಳನ್ನು ಸ್ಥಳ ಮಹಜರು ಮಾಡಲು ಕರೆತರಲಿರುವ ಪೊಲೀಸರು - ಹುಬ್ಬಳ್ಳಿ ಘಟನಾ ಸ್ಥಳದ ಸ್ಥಳ ಮಹಜರು

ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಸಿದ ಆರೋಪಿಗಳನ್ನು ಪೊಲೀಸರು ಇಂದು ಘಟನಾ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಿದ್ದಾರೆ.

The police brought the pro-Pak slogans shouted accused for place inspection
ಪಾಕ್ ಪರ ಘೋಷಣೆ ಕೂಗಿದ ಆರೋಪಿಗಳನ್ನು ಸ್ಥಳ ಮಹಜರು ಮಾಡಲು ಕರೆತರಲಿರುವ ಪೊಲೀಸರು
author img

By

Published : Feb 27, 2020, 12:18 PM IST

ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಸಿದ ಆರೋಪಿಗಳನ್ನು ಪೊಲೀಸರು ಇಂದು ಘಟನಾ ಸ್ಥಳಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಿದ್ದಾರೆ.

ಕಳೆದ ಮೂರು ದಿನಗಳಿಂದ ಪೊಲೀಸರು ಗೌಪ್ಯ ಸ್ಥಳದಲ್ಲಿ ಆರೋಪಿಗಳ ವಿಚಾರಣೆ ನಡೆಸುತ್ತಿದ್ದು, ನಾಳೆ ಸಾಯಂಕಾಲದವರೆಗೂ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲೇ ಇರಲಿದ್ದಾರೆ. ಇಂದು ಸ್ಥಳ ಮಜಹರು ನಡೆಸುವ ಸಲುವಾಗಿ ಪೊಲೀಸರು ಆರೋಪಿಗಳನ್ನು ಹುಬ್ಬಳ್ಳಿಗೆ ಕರೆದುಕೊಂಡು ಬಂದಿದ್ದಾರೆ.

ಕಳೆದ ಫೆ. 17 ರಂದು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ವೇಳೆ ಕೋರ್ಟ್‌ನಲ್ಲೇ ಅವರ ಮೇಲೆ ಹಲ್ಲೆ ಮಾಡಲಾಗಿತ್ತು. ಈ ಹಿನ್ನಲೆ ಹುಬ್ಬಳ್ಳಿಯ ಜೈಲಿನಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿ ಕಳೆದು ಮೂರು ದಿನಗಳಿಂದ ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಸದ್ಯ ಬೆಂಗಳೂರಿಗೆ ವರ್ಗಾವಣೆ ಆಗುವ ಸಾಧ್ಯತೆ ಇದೆ.

ಇನ್ನೂ ಪ್ರಕರಣವನ್ನು ವಿಶೇಷ ತನಿಖಾ ದಳಕ್ಕೆ ವರ್ಗಾಯಿಸಲಾಗುತ್ತದೆ ಎನ್ನಲಾಗುತ್ತಿದ್ದು, ಈ ಬಗ್ಗೆ ಇನ್ನು ಸ್ಪಷ್ಟನೆ ಸಿಕ್ಕಿಲ್ಲ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.